HomeGadag Newsಗದಗ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಅಶೋಕ ಕೆ. ಮಂದಾಲಿ ನೇಮಕ

ಗದಗ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಅಶೋಕ ಕೆ. ಮಂದಾಲಿ ನೇಮಕ

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಗದಗ: ಗದಗ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯ ಪ್ರಥಮ ಅಧ್ಯಕ್ಷರನ್ನಾಗಿ ಅಶೋಕ ಕೆ. ಮಂದಾಲಿಯವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ವಿನಯಕುಮಾರ ಸೊರಕೆ ಅವರು ನೇಮಿಸಿದ್ದಾರೆ.

ವಿದ್ಯಾರ್ಥಿ ಹಂತದಿಂದಲೇ ಪಕ್ಷದೊಂದಿಗೆ ಗುರುತಿಸಿಕೊಂಡಿದ್ದ ಇವರು ಗದಗ ತಾಲೂಕು ವಿದ್ಯಾರ್ಥಿ ಕಾಂಗ್ರೆಸ್ (ಎನ್‌ಎಸ್‌ಯುಐ)ನ ಅಧ್ಯಕ್ಷರಾಗಿ 5 ವರ್ಷಗಳ ಕಾಲ ಇದ್ದರು. ಇವರ ಪಕ್ಷ ಸಂಘಟನೆಯನ್ನು ಗಮನಿಸಿ, ಇವರಿಗೆ ಇದೀಗ ಮತ್ತೊಂದು ಜವಾಬ್ದಾರಿ ನೀಡಲಾಗಿದೆ.

ಗದಗ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಅಶೋಕ ಕೆ. ಮಂದಾಲಿ ನೇಮಕವಾಗಿದ್ದಕ್ಕೆ ಗದಗ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ, ಖನಿಜ ಅಭಿವೃದ್ಧಿ ನಿಗಮದ ಅಧ್ಯક્ષರೂ ಆಗಿರುವ ರೋಣ ವಿಧಾನಸಭಾ ಮತಕ್ಷೇತ್ರದ ಶಾಸಕ ಜಿ.ಎಸ್. ಪಾಟೀಲ, ರಾಜ್ಯದ ಕಾನೂನು ಹಾಗೂ ಸಂಸದೀಯ ವ್ಯವಹಾರಗಳ ಇಲಾಖೆ, ಪ್ರವಾಸೋದ್ಯಮ ಇಲಾಖೆ, ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಕೆ. ಪಾಟೀಲ, ಕೆಪಿಸಿಸಿ ಉಪಾಧ್ಯಕ್ಷ ಡಿ.ಆರ್. ಪಾಟೀಲ, ಮಾಜಿ ಶಾಸಕರಾದ ಬಿ.ಆರ್. ಯಾವಗಲ್ಲ, ಜಿ.ಎಸ್. ಗಡ್ಡದೇವರಮಠ, ರಾಮಕೃಷ್ಣ ದೊಡ್ಡಮನಿ, ರಾಮಣ್ಣ ಲಮಾಣಿ, ಹಾವೇರಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ, ಶಿರಹಟ್ಟಿ ವಿಧಾನಸಭಾ ಮತಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸುಜಾತಾ ದೊಡ್ಡಮನಿ, ಗದಗ ಜಿಲ್ಲಾ ಕಾಂಗ್ರೆಸ್ ಪಕ್ಷದ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರುಗಳಾದ ಬಿ.ಬಿ. ಅಸೂಟಿ, ಬಸವರಾಜ ಸುಂಕಾಪೂರ, ಪ್ರವೀಣ ಯಾವಗಲ್ಲ, ಎಂ.ಬಿ. ಕೋಳೇರಿ, ವೀರಣ್ಣ ಅಂಗಡಿ, ಶರಣಪ್ಪ ಬೆಟಗೇರಿ, ಡಿ.ಡಿ. ಮೋರನಾಳ, ಜಿ.ಆರ್. ಕೊಪ್ಪದ, ಹುಮಾಯೂನ್ ಮಾಗಡಿ, ಗದಗ ಜಿಲ್ಲಾ ಕಾಂಗ್ರೆಸ್ ಎಸ್‌ಸಿ ಘಟಕದ ಅಧ್ಯಕ್ಷ ಬಸವರಾಜ ಕಡೇಮನಿ ಸೇರಿದಂತೆ ಪಕ್ಷದ ಮುಖಂಡರು ಅಭಿನಂದಿಸಿದ್ದಾರೆ.

ಪ್ರಸ್ತುತ ಗದಗ ತಾಲೂಕು ಮಟ್ಟದ ಪಂಚ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾಗಿರುವ ಅಶೋಕ ಮಂದಾಲಿ, ಗದಗ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿ ಎರಡು ಅವಧಿಗೆ ಕಾರ್ಯನಿರ್ವಹಿಸಿದ್ದರು. ಇದಕ್ಕೂ ಮುನ್ನ ಗದಗ ವಿಧಾನಸಭಾ ಕ್ಷೇತ್ರದ ಅಧ್ಯಕ್ಷರಾಗಿ ಮೂರು ವರ್ಷದ ಒಂದು ಅವಧಿಗೆ, ಅದಕ್ಕೂ ಮುನ್ನ ಉಪಾಧ್ಯಕ್ಷರಾಗಿ ಮೂರು ವರ್ಷ ಕಾರ್ಯನಿರ್ವಹಿಸಿದ್ದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!