ಹುಬ್ಬಳ್ಳಿ ಉಪನಗರ ಠಾಣೆಯ ಎಎಸ್ಐ ನಾಭಿರಾಜ್ ದಯಣ್ಣವರು ಫ್ಲೈಓವರ್ ಕಾಮಗಾರಿಯ ರಾಡ್ ಬಿದ್ದು ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಎಎಸ್ಐ ನಾಭಿರಾಜ್ ದಯಣ್ಣವರ ಕೋರ್ಟ್ ವೃತ್ತದ ಬಳಿ ಫ್ಲೈ ಓವರ್ ಕಾಮಗಾರಿಯ ರಾಡ್ ಬಿದ್ದು ಗಂಭೀರ ಗಾಯಗೊಂಡಿದ್ದರು. ಕೂಡಲೆ ಅವರನ್ನು ಸ್ಥಳೀಯರು ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದರು. ಇಂದು ಚಿಕಿತ್ಸೆ ಫಲಿಸದೆ ಎಎಸ್ಐ ನಾಭಿರಾಜ್ ದಯಣ್ಣವರ ಕೊನೆಯುಸಿರೆಳೆದಿದ್ದಾರೆ.
Advertisement
ಗುತ್ತಿಗೆದಾರರ ನಿರ್ಲಕ್ಷ್ಯ ಹಿನ್ನೆಲೆ ಅವಘಡ ಸಂಭವಿಸಿದೆ ಎಂದು ಝಂಡು ಕನ್ಸ್ಟ್ರಕ್ಷನ್ ನಿರ್ದೇಶಕರಾದ ರಾಮ್ಕುಮಾರ್, ಮೋಹಿತ್ ಮತ್ತು ಮನುದೀಪ್, ಯೋಜನಾ ನಿರ್ದೇಶಕ, ಎಂಜಿನಿಯರ್, ಸುರಕ್ಷತಾ ಅಧಿಕಾರಿ, ಕ್ರೇನ್ ಆಪರೇಟರ್ ಮತ್ತು ಕಾರ್ಮಿಕರ ವಿರುದ್ಧ ಎಎಸ್ಐ ಪುತ್ರ ರುಷಭ್ ದೂರು ದಾಖಲಿಸಿದ್ದಾರೆ.