ಇಂದು ಭಾರತ ಮತ್ತು ಪಾಕಿಸ್ತಾನ ನಡುವಿನ ಏಷ್ಯಾ ಕಪ್ ಪಂದ್ಯವು ದುಬೈ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲಿದೆ. ಭಾರತೀಯ ಕಾಲಮಾನದ ಪ್ರಕಾರ ಭಾರತ- ಪಾಕಿಸ್ತಾನ ನಡುವಣ ಪಂದ್ಯ ರಾತ್ರಿ 8 ಗಂಟೆಗೆ ಆರಂಭವಾಗಲಿದೆ. ಭಾರತ vs ಪಾಕಿಸ್ತಾನ ಪಂದ್ಯವನ್ನು ಭಾರತದಲ್ಲಿ ಸೋನಿ ಸ್ಪೋರ್ಟ್ಸ್ ನೆಟ್ವರ್ಕ್ನಲ್ಲಿ ಟಿವಿಯಲ್ಲಿ ನೇರ ಪ್ರಸಾರ ಮಾಡಲಾಗುತ್ತದೆ. ಸೋನಿ ಲಿವ್ ಅಪ್ಲಿಕೇಶನ್ ಮತ್ತು ವೆಬ್ಸೈಟ್ನಲ್ಲಿ ಲೈವ್ ಸ್ಟ್ರೀಮಿಂಗ್ ಅನ್ನು ಆನಂದಿಸಬಹುದು.
ಅಭಿಮಾನಿಗಳಿಂದ ಈ ಪಂದ್ಯಕ್ಕೆ ತೀವ್ರ ವಿರೋಧ ವ್ಯಕ್ತವಾಗುತ್ತಿದ್ದರೂ, ಪಂದ್ಯದ ಬಗ್ಗೆ ಕುತೂಹಲ ಕಡಿಮೆಯಾಗಿಲ್ಲ. 2 ತಂಡಗಳಲ್ಲೂ ವಿಶ್ವ ಶ್ರೇಷ್ಠ ಆಟಗಾರರಿದ್ದು, ಭಾರೀ ಪೈಪೋಟಿ ನಿರೀಕ್ಷಿಸಲಾಗಿದೆ. ಆದರೆ ಟಿ20 ಹಾಗೂ ಏಷ್ಯಾಕಪ್‌ನ ದಾಖಲೆ ಗಮನಿಸಿದರೆ ಭಾರತವೇ ಈ ಪಂದ್ಯದಲ್ಲಿ ಗೆಲ್ಲುವ ಫೇವರಿಟ್ ಎನಿಸಿಕೊಂಡಿದ್ದು, ಟೂರ್ನಿಯಲ್ಲಿ ಸತತ 2ನೇ ಗೆಲುವಿನ ವಿಶ್ವಾಸದಲ್ಲಿದೆ. ತಂಡ ‘ಬಿ’ ಗುಂಪಿನ ತನ್ನ ಆರಂಭಿಕ ಪಂದ್ಯದಲ್ಲಿ ಯುಎಇ ವಿರುದ್ಧ ಗೆದ್ದಿತ್ತು. ಅತ್ತ ಪಾಕ್ ತಂಡ ಒಮಾನ್ ವಿರುದ್ಧ ಗೆಲ್ಲುವ ಮೂಲಕ ಟೂರ್ನಿಗೆ ಕಾಲಿರಿಸಿದೆ.
ಸಂಭಾವ್ಯ ಆಟಗಾರರ ಪಟ್ಟಿ
ಪಾಕಿಸ್ತಾನ ತಂಡ: ಸೈಮ್, ಫರ್ಹಾನ್, ಹಾರಿಸ್, ಫಖರ್, ಸಲ್ಮಾನ್ ಆಘಾ(ನಾಯಕ), ಹಸನ್ ನವಾಜ್, ಮೊಹಮ್ಮದ್ ನವಾಜ್, ಫಹೀಮ್, ಶಾಹೀನ್, ಸುಫಿಯಾನ್, ಅಬ್ರಾರ್ ಅಹ್ಮದ್.
ಭಾರತ ತಂಡ: ಅಭಿಷೇಕ್ ಶರ್ಮಾ, ಶುಭಮನ್ ಗಿಲ್, ಸೂರ್ಯಕುಮಾರ್ ಯಾದವ್ (ನಾಯಕ), ತಿಲಕ್ ವರ್ಮಾ, ಸಂಜು ಸ್ಯಾಮ್ಸನ್, ಶಿವಂ ದುಬೆ, ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ವರುಣ್ ಚಕ್ರವರ್ತಿ.



