HomeSports Newsತ್ರಿವಿಧ ಜಿಗಿತದಲ್ಲಿ ಆಸೀಫ್ ಎಸ್ ನದಾಫ್ ರಾಷ್ಟ್ರಮಟ್ಟಕ್ಕೆ ಆಯ್ಕೆ

ತ್ರಿವಿಧ ಜಿಗಿತದಲ್ಲಿ ಆಸೀಫ್ ಎಸ್ ನದಾಫ್ ರಾಷ್ಟ್ರಮಟ್ಟಕ್ಕೆ ಆಯ್ಕೆ

For Dai;y Updates Join Our whatsapp Group

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಗದಗ ತಾಲೂಕಿನ ಶಿರುಂಜ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿ ಆಸೀಫ್ ಎಸ್ ನದಾಫ್ ಕೋಲಾರದಲ್ಲಿ ನಡೆದ ರಾಜ್ಯಮಟ್ಟದ ಅಥ್ಲೆಟಿಕ್ ವಿಭಾಗದ ತ್ರಿವಿಧ ಜಿಗಿತದಲ್ಲಿ ಪ್ರಥಮ ಸ್ಥಾನ ಪಡೆಯುವ ಮೂಲಕ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾನೆ.

ಕುಗ್ರಾಮದ ಶಿರುಂಜದ ಪ್ರೌಢಶಾಲೆಯಲ್ಲಿ ದೈಹಿಕ ಶಿಕ್ಷಕರ ಕೊರತೆಯ ನಡುವೆಯೂ ಗ್ರಾಮೀಣ ಭಾಗದ ಬಡ ಪ್ರತಿಭೆಗೆ ಪಿಯುಸಿ ಓದುತ್ತಿರುವ ಆತನ ಸಹೋದರ ದಿವಾನ್‌ಸಾಬನೇ ತರಬೇತುಗೊಳಿಸಿದ್ದಾನೆ. ವಿದ್ಯಾರ್ಥಿಯ ಸಾಧನೆಗೆ ಜಿಲ್ಲಾ ಉಸ್ತುವಾರಿ ಸಚಿವರು, ಶಿಕ್ಷಣ ಇಲಾಖೆಯ ಉಪನಿರ್ದೇಶಕರು, ದೈಹಿಕ ಶಿಕ್ಷಣ ಇಲಾಖೆ, ಅಧಿಕಾರಿ ವರ್ಗ, ಶಿಕ್ಷಕ ವೃಂದ, ಎಸ್‌ಡಿಎಂಸಿ, ಗ್ರಾಮಸ್ಥರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

LEAVE A REPLY

Please enter your comment!
Please enter your name here

E-Paper

E-paper

Must Read

spot_img