ಬೆಂಗಳೂರು:- ರಾಜಧಾನಿ ಬೆಂಗಳೂರಿನಲ್ಲಿ ಅಸ್ಸಾಂ ಯುವತಿಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಇದೀಗ ಅರೆಸ್ಟ್ ಮಾಡಲಾಗಿದೆ.
ಆರವ್ ಹನೋಯ್ ಬಂಧಿತ ಆರೋಪಿ. ಇಂದಿರಾನಗರದ ಅಪಾರ್ಟ್‌ಮೆಂಟ್‌ನಲ್ಲಿ ಅಸ್ಸಾಂ ಮೂಲದ ಯುವತಿ ಮಾಯಾ ಗೊಗಾಯ್ ಅವರನ್ನು ಬರ್ಬರವಾಗಿ ಹತ್ಯೆ ಮಾಡಿ ಹೊರ ರಾಜ್ಯಕ್ಕೆ ಎಸ್ಕೇಪ್ ಆಗಿದ್ದ ಆರೋಪಿಯನ್ನು ಪತ್ತೆ ಮಾಡಿದ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಆರೋಪಿ ಪತ್ತೆಗೆ ಹಿರಿಯ ಅಧಿಕಾರಿಗಳು ಎರಡು ವಿಶೇಷ ತಂಡ ರಚಿಸಿದ್ದರು. ಇಂದಿರಾನಗರ ಪೊಲೀಸರು ಆರೋಪಿ ಆರವ್ ಹನೋಯ್ನನ್ನು ಬೆಂಗಳೂರಿಗೆ ಕರೆತರುತ್ತಿದ್ದಾರೆ ಎಂದು ತಿಳಿದುಬಂದಿದೆ.
ಕೊಲೆ ಬಳಿಕ ಆರೋಪಿ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡು ಎಸ್ಕೇಪ್ ಆಗಿದ್ದ. ಸಿಸಿಟಿವಿ ದೃಶ್ಯಾವಳಿ ಪರಿಶೀಲನೆ ನಡೆಸಿ ಆರೋಪಿ ಎಸ್ಕೇಪ್ ಆದ ಕ್ಯಾಬ್ ಮಾಹಿತಿಯನ್ನು ಪೊಲೀಸರು ಕಲೆ ಹಾಕಿದ್ದರು. ಕ್ಯಾಬ್ ಬಂದು ಹೋಗಿರುವ ಮಾರ್ಗದ ಸಿಸಿಟಿವಿಗಳನ್ನು ಪೊಲೀಸರು ಪರಿಶೀಲನೆ ಮಾಡಿ, ಆರೋಪಿ ಕ್ಯಾಬ್‌ನಿಂದ ಎಲ್ಲಿ ಇಳಿದಿದ್ದ ಅನ್ನೋದನ್ನ ಪತ್ತೆ ಹಚ್ಚಿದ್ದರು. ಇದರ ಜೊತೆಗೆ ಆರವ್ ಹನೋಯ್ ಹಾಗೂ ಮಾಯಾ ಗೊಗಾಯ್ ಪರಿಚಯದ ಬಗ್ಗೆಯೂ ಪೊಲೀಸರು ತನಿಖೆ ಮಾಡುತ್ತಿದ್ದಾರೆ.