ಬೆಂಗಳೂರು:- BMTC ಕಂಡಕ್ಟರ್ & ಚಾಲಕನ ಮೇಲಿನ ಹಲ್ಲೆ ಕೇಸ್ ಗೆ ಸಂಬಧಪಟ್ಟಂತೆ ಸಚಿವ ರಾಮಲಿಂಗಾರೆಡ್ಡಿ ಪ್ರತಿಕ್ರಿಯೆ ನೀಡಿದ್ದಾರೆ.
ಟ್ಯಾನರಿ ರಸ್ತೆಯಲ್ಲಿ ನಿನ್ನೆ ಸಂಜೆ ಕ್ಷುಲ್ಲಕ ಕಾರಣಕ್ಕೆ ಬಿಎಂಟಿಸಿ ಬಸ್ ಚಾಲಕ ಮತ್ತು ಕಂಡಕ್ಟರ್ ಮೇಲೆ ಕುಡಿದ ಮತ್ತಿನಲ್ಲಿ ಕಿಡಿಗೇಡಿಗಳಿಂದ ಹಲ್ಲೆ ಮಾಡಿರುವಂತಹ ಘಟನೆ ಬಗ್ಗೆ ಮಾತನಾಡಿದ ರಾಮಲಿಂಗಾರೆಡ್ಡಿ,
ಆರೋಪಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವಂತೆ ಬೆಂಗಳೂರು ನಗರ ಪೊಲೀಸ್ ಕಮಿಷನರ್ಗೆ ಪತ್ರ ಬರೆಯುತ್ತೇನೆ ಎಂದಿದ್ದಾರೆ. ನಿನ್ನೆ ನಡೆದಿರುವ ಘಟನೆಯ ಬಗ್ಗೆ ಮಾಹಿತಿ ಪಡೆದುಕೊಂಡಿದ್ದೇನೆ. BMTC ಎಂಡಿ ರಾಮಚಂದ್ರನ್, ಪೊಲೀಸ್ ಆಯುಕ್ತರ ಭೇಟಿ ಮಾಡುತ್ತೇನೆ ಎಂದಿದ್ದಾರೆ.
ಡ್ರೈವರ್, ಚಾಲಕರ ಮೇಲೆ ಹಲ್ಲೆ ನಡೆಸುವವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದು, ಆರೋಪಿಗಳ ವಿರುದ್ಧ ಪೊಲೀಸರು ಕಠಿಣ ಕ್ರಮ ಕೈಗೊಳ್ಳಬೇಕು. ಕೇಸ್ ಮಾಡುವುದು ಮುಖ್ಯವಲ್ಲ, ಶಿಕ್ಷೆ ಆಗುವ ರೀತಿಯಲ್ಲಿ ಮಾಡಬೇಕು. ಜೈಲಿಗೆ ಹೋಗುವ ರೀತಿ ಮಾಡಬೇಕು, ಆಗ ಅವರಿಗೆ ಬುದ್ಧಿ ಬರುತ್ತದೆ ಎಂದು ಹೇಳಿದ್ದಾರೆ.