ಬೆಂಗಳೂರು: ಮಾಜಿ ಸಚಿವ ಹೆಚ್ಎಂ ರೇವಣ್ಣ ವಿರುದ್ದ ಹಲ್ಲೆ ಮತ್ತು ಜಾತಿನಿಂದನೆ ಆರೋಪ ಕೇಳಿಬಂದಿದ್ದು, ಕಾಂಗ್ರೆಸ್ ಮಹಿಳಾ ಕಾರ್ಯಕರ್ತೆಯಿಂದ ರೇವಣ್ಣ ವಿರುದ್ಧ ಹೈ ಗ್ರೌಂಡ್ಸ್ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ನಿನ್ನೆ ಮಧ್ಯಾಹ್ನ ಕುಮಾರ ಕೃಪದಲ್ಲಿ ಹಲ್ಲೆ ಮಾಡಿರೋ ಆರೋಪ ಕೇಳಿಬಂದಿದ್ದು,
ಮಧ್ಯಾಹ್ನ 3:30ರ ಸುಮಾರಿಗೆ ರೂಂ.ನಂಬರ್ 2ರಲ್ಲಿ ರೇವಣ್ಣ ಊಟ ಮಾಡುತ್ತಿದ್ದರು. ಈ ವೇಳೆ ಅವರನ್ನು ಭೇಟಿಯಾಗಿ ಮಾತನಾಡಿಸಲು ತೆರಳಿದ್ದೆ. ಈ ವೇಳೆ ನನ್ನ ಮೊಬೈಲ್ ಕಸಿದುಕೊಂಡು ನನನ್ನು ಅವಾಚ್ಯ ಶಬ್ದಗಳಿಂದ ಬೈದು, ಜಾತಿ ನಿಂದನೆ ಮಾಡಿದ್ದಾರೆ.
ಬಳಿಕ ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ. ರೇವಣ್ಣ ಮಹಿಳೆಯ ಮೊಬೈಲ್ ಕಸಿದುಕೊಳ್ಳುತ್ತಿರುವ ವಿಡಿಯೋ ಲಭ್ಯವಾಗಿದೆ. ಹಲ್ಲೆ ಪರಿಣಾಮ ಮಹಿಳೆಯ ಕೈ ಮೂಳೆಗೆ ಫ್ಯಾಕ್ಚರ್ ಆಗಿದ್ದು, ಬಳಿಕ ಆಸ್ಪತ್ರೆಗೆ ಚಿಕಿತ್ಸೆ ಪಡೆದುಕೊಂಡಿದ್ದಾರೆ. ಸದ್ಯ ಹೈ ಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಈ ಕುರಿತು ಎನ್‌ಸಿಆರ್ ದಾಖಲಾಗಿದೆ.