ಬೆಂಗಳೂರು: ಬಿಹಾರದಲ್ಲಿ ನ್ಯಾಯ ಸಮ್ಮತವಾಗಿ ವಿಧಾನಸಭಾ ಚುನಾವಣೆ ನಡೆದಿಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಆರೋಪಿಸಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಬಿಹಾರದಲ್ಲಿ ನ್ಯಾಯ ಸಮ್ಮತವಾಗಿ ವಿಧಾನಸಭಾ ಚುನಾವಣೆ ನಡೆದಿಲ್ಲ. ಕಾಂಗ್ರೆಸ್ ಮತದಾರರನ್ನು ಉದ್ದೇಶಪೂರ್ವಕವಾಗಿ ಡಿಲೀಟ್ ಮಾಡಲಾಗಿದೆ ಎಂದರು.
ಇನ್ನೂ ಸಾರ್ವಜನಿಕ ಸೇವೆ ನೀಡುವ ವಾಹನಗಳಲ್ಲಿ ನಿಗದಿಗಿಂತ ಹೆಚ್ಚಿನ ಸರಕು ಸಾಗಣೆ ಮಾಡುತ್ತಿರುವುದು ಕಂಡು ಬರುತ್ತಿದೆ. ಅದರ ಜತೆಗೆ ಹೊರರಾಜ್ಯಗಳಲ್ಲಿ ನೋಂದಣಿ ಮಾಡಿಕೊಂಡು ರಾಜ್ಯದ ತೆರಿಗೆ ಪಾವತಿಸದೇ ಸಂಚರಿಸುವ ವಾಹನಗಳ ಸಂಖ್ಯೆಯೂ ಹೆಚ್ಚಾಗಿದೆ. ಈ ಎಲ್ಲದರ ಕುರಿತು ನಿರಂತರವಾಗಿ ತಪಾಸಣೆ ನಡೆಸಬೇಕು.
ನಿಯಮ ಉಲ್ಲಂಘಿಸುವ ಮತ್ತು ತೆರಿಗೆ ಪಾವತಿಸದ ವಾಹನಗಳ ವಿರುದ್ಧ ಕ್ರಮ ಕೈಗೊಳ್ಳಲು ತಪಾಸಣೆ ಹೆಚ್ಚಿಸಬೇಕು. ಅದರಲ್ಲೂ ಶಾಲಾ ವಾಹನಗಳು ಅರ್ಹತಾ ಪತ್ರ ನವೀಕರಿಸಿವೆಯೇ ಎಂಬುದನ್ನು ಪರಿಶೀಲಿಸಬೇಕು. ಒಂದು ವೇಳೆ ಅರ್ಹತಾ ಪತ್ರ ನವೀಕರಿಸದಿದ್ದರೆ ವಾಹನ ಮಾಲೀಕರಿಗೆ ನೋಟಿಸ್ ನೀಡಿ ನಿಯಮದಂತೆ ಕ್ರಮ ಕೈಗೊಳ್ಳಬೇಕು ಎಂದು ಹೇಳಿದ್ದಾರೆ.



