ನವದೆಹಲಿ: ಬಾಹ್ಯಾಕಾಶಕ್ಕೆ ಹೋದ ಎರಡನೇ ಭಾರತೀಯ ಹಾಗೂ ಐಎಸ್ಎಸ್ ಪ್ರವೇಶಿಸಿದ ಮೊದಲ ಭಾರತೀಯ ಗಗನಯಾತ್ರಿ ಎಂಬ ಇತಿಹಾಸ ನಿರ್ಮಿಸಿದ ಶುಭಾಂಶು ಶುಕ್ಲಾ ಅವರು ಸ್ವದೇಶಕ್ಕೆ ಮರಳಿದ್ದಾರೆ. ಬಾಹ್ಯಾಕಾಶ ಮಿಷನ್ ಪೂರ್ಣಗೊಳಿಸಿದ ಬಳಿಕ ತಾಯ್ನಾಡಿಗೆ ಬಂದಿರುವುದು ಇದೇ ಮೊದಲು.
ಇಂದು ಸಂಜೆ, ದೆಹಲಿಯ 7 ಲೋಕ ಕಲ್ಯಾಣ್ ಮಾರ್ಗದಲ್ಲಿರುವ ಪ್ರಧಾನಿಯವರ ನಿವಾಸದಲ್ಲಿ, ಶುಭಾಂಶು ಶುಕ್ಲಾ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಲಿದ್ದಾರೆ. ಈ ವೇಳೆ ತಮ್ಮ ಬಾಹ್ಯಾಕಾಶ ಅನುಭವವನ್ನು ಪ್ರಧಾನಿಯೊಂದಿಗೆ ಹಂಚಿಕೊಳ್ಳುವ ನಿರೀಕ್ಷೆಯಿದೆ.
ಈ ವಿಚಾರವನ್ನು ಬಿಜೆಪಿ ಲೋಕಸಭೆಯಲ್ಲಿ ಚರ್ಚೆಗೆ ಪ್ರಸ್ತಾಪ ಮಾಡಿದ್ದು, ಶುಕ್ಲಾ ಅವರ ಸಾಧನೆಯನ್ನು ರಾಷ್ಟ್ರ ಮಟ್ಟದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ.ಭಾನುವಾರ ಮಧ್ಯರಾತ್ರಿ 1:30ರ ಸುಮಾರಿಗೆ ದೆಹಲಿಗೆ ಆಗಮಿಸಿದ ಶುಕ್ಲಾ ಅವರಿಗೆ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅದ್ದೂರಿ ಸ್ವಾಗತ ಸಿಕ್ಕಿತ್ತು. ಕೇಂದ್ರ ಸಚಿವ ಜಿತೇಂದ್ರ ಸಿಂಗ್, ದೆಹಲಿ ಸಿಎಂ ರೇಖಾ ಗುಪ್ತಾ ಸೇರಿದಂತೆ ಹಲವರು ಅವರನ್ನು ಬರಮಾಡಿಕೊಂಡರು.