ಬೆಂಗಳೂರು: ಮಳೆಯಿಂದಾಗಿ ಸಂಭವಿಸುವ ಅನಾಹುತಗಳಿಗೆ ಪರಿಹಾರ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ನಗರದಲ್ಲಿ ರಾಜ್ಯದಲ್ಲಿ ಮಳೆಯಿಂದಾಗಿ ಅನಾಹುತಗಳು ಉಂಟಾಗಿದ್ದು, ಸರ್ಕಾರದ ಕ್ರಮದ ವಿಚಾರವಾಘಿ ಮಾತನಾಡಿದ ಅವರು, ಮಳೆಯಿಂದಾಗಿ ಸಂಭವಿಸುವ ಅನಾಹುತಗಳಿಗೆ ಪರಿಹಾರ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
Advertisement
ಇನ್ನೂ ಇಂದಿನಿಂದ ಬೆಂಗಳೂರು – ಗ್ರೇಟರ್ ಬೆಂಗಳೂರು ಆಗಿದೆ. ಗ್ರೇಟರ್ ಬೆಂಗಳೂರು ಪ್ರದೇಶದಲ್ಲಿ ಕನಿಷ್ಠ ಮೂರು ಪಾಲಿಕೆ ರಚನೆಯಾಗುವ ಸಾಧ್ಯತೆಯಿದೆ. ರಾಜ್ಯದ ಮುಖ್ಯಮಂತ್ರಿಗಳು ಪ್ರಾಧಿಕಾರದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಲಿದ್ದು, ಮುಂದಿನ ದಿನಗಳಲ್ಲಿ ಈ ಬಗ್ಗೆ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದರು.