ಬೆಂಗಳೂರು: ಬೆಂಗಳೂರಿನ ಡೇರಿ ಸರ್ಕಲ್ ಬಳಿ ಬುಧವಾರ ಮಧ್ಯಾಹ್ನ ಹಾಡಹಗಲೇ 7.11 ಕೋಟಿ ರೂ. ದರೋಡೆ ಮಾಡಿರುವ ಘಟನೆ ಸಂಬಂಧ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಬೆಂಗಳೂರು ಪೊಲೀಸರು ತಿರುಪತಿಯಲ್ಲಿ ಬಾಣಸವಾಡಿಯ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.
ನಿನ್ನೆ ಮಧ್ಯಾಹ್ನ ಸಿಎಂಎಸ್ ವಾಹನದಲ್ಲಿ ಸಾಗಿಸುತ್ತಿದ್ದ ಹಣವನ್ನು ದರೋಡೆ ಮಾಡಿದ ಬಳಿಕ ಆರೋಪಿಗಳು ಬೆಂಗಳೂರು ಸಿಟಿ ಬಿಟ್ಟು, ತಿರುಪತಿಗೆ ಪರಾರಿಯಾಗಿದ್ದರು. ಈಗ ತಿರುಪತಿಯಲ್ಲಿ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದು ಬೆಂಗಳೂರು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
ನಗರದ ಡೈರಿ ಸರ್ಕಲ್ ಫ್ಲೈಓವರ್ ಮೇಲೆ ಎಟಿಎಂ ವಾಹನದಲ್ಲಿದ್ದ ಬರೋಬ್ಬರಿ 7.11 ಕೋಟಿ ರೂ ದೋಚಿಕೊಂಡು ಗ್ಯಾಂಗ್ ಇನೋವಾ ಕಾರಿನಲ್ಲಿ ಪರಾರಿಯಾಗಿದೆ. ಈ ಸಂಬಂಧ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಸಿಎಂಎಸ್ ಕಂಪನಿ ಮ್ಯಾನೇಜರ್ ದೂರಿನ ಆಧಾರದಲ್ಲಿ ಡಕಾಯಿತಿ ಎಂದು ಎಫ್ಐಆರ್ನಲ್ಲಿ ಉಲ್ಲೇಖಿಸಲಾಗಿದೆ.


