ಚಿಕ್ಕೋಡಿ:- ರಾಯಬಾಗ ತಾಲೂಕಿನ ಹಂದಿಗುಂದ ಗ್ರಾಮದಲ್ಲಿ ವ್ಯಕ್ತಿಯ ಮನೆ ಮೇಲೆ ಅರಣ್ಯಾಧಿಕಾರಿಗಳು ದಾಳಿ ನಡೆಸಿ ಎರಡು ನರಿ ಮರಿಗಳನ್ನು ರಕ್ಷಣೆ ಮಾಡಿದ್ದಾರೆ.
ಖಚಿತ ಮಾಹಿತಿ ಮೇರೆಗೆ ಅರಣ್ಯ ಸಂಚಾರಿ ದಳದ ಪೊಲೀಸರು ದಾಳಿ ನಡೆಸಿದ ವೇಳೆ ಮಹಾಲಿಂಗ ದೊಡ್ಡಮನಿ ಎಂಬುವರ ಮನೆಯಲ್ಲಿ ನರಿಗಳು ಪತ್ತೆಯಾಗಿದೆ. ಕೂಡಲೇ ನರಿಗಳನ್ನು ಅಧಿಕಾರಿಗಳು ರಕ್ಷಣೆ ಮಾಡಿದ್ದಾರೆ.
ಘಟನೆ ಸಂಬಂಧ ಹಾರೂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



