ಬೆಂಗಳೂರು:- ಯುವಕನೋರ್ವ ಅಪಾರ್ಟ್ಮೆಂಟ್ ಸೆಕ್ಯೂರಿಟಿ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕುಂಬಳಗೋಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಸೆಕ್ಯೂರಿಟಿ ಗಾರ್ಡ್ ಪುನೀತ್ ಮೇಲೆ ಯುವಕ ವರುಣ್ ಹಲ್ಲೆ ನಡೆಸಿದ್ದಾನೆ ಎಂದು ತಿಳಿದು ಬಂದಿದೆ. ಹಲ್ಲೆಗೊಳಗಾದ ಪುನೀತ್ ಅವರು ಕುಂಬಳಗೋಡು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ದೊಡ್ಡಬೆಲೆಯ ಪ್ರಾವಿಡೆಂಟ್ ಸನ್ವರ್ತ್ ಅಪಾರ್ಟ್ಮೆಂಟ್ಗೆ ಸೆಕ್ಯೂರಿಟಿ ಗಾರ್ಡ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
ನಿನ್ನೆ ತಡರಾತ್ರಿ 12 ಗಂಟೆ ಸುಮಾರಿಗೆ ಯುವಕ ವರುಣ್ ಅಪಾರ್ಟ್ಮೆಂಟ್ಗೆ ಇಬ್ಬರು ಯುವತಿಯರು ಹಾಗೂ ಓರ್ವ ಯುವಕನನ್ನು ಕರೆತಂದಿದ್ದ. ಯುವತಿಯರನ್ನು ಕರೆದುಕೊಂಡು ಬಂದ ಹಿನ್ನೆಲೆ ಅನುಮಾನಗೊಂಡ ಸೆಕ್ಯೂರಿಟಿ ಗಾರ್ಡ್ ಪುನೀತ್, ರಾತ್ರಿ 12 ಗಂಟೆ ನಂತರ ಅಪರಿಚಿತರಿಗೆ ಪ್ರವೇಶವಿಲ್ಲ ಎಂದು ಯುವಕನಿಗೆ ಖಡಕ್ ಆಗಿ ಹೇಳಿದ್ದಾರೆ.
ಇದರಿಂದ ಕೋಪಗೊಂಡ ವರುಣ್, ಹಲ್ಲೆ ನಡೆಸಿದ್ದಾನೆ. ನಾನು ಯಾರ್ ಗೊತ್ತಾ? ಡಿಸಿಪಿ ಮಗ. ಸಿಎಂ ಸಿದ್ದರಾಮಯ್ಯ ನನ್ನ ಸಂಬಂಧಿ ಎಂದು ಹೇಳಿ ವರುಣ್, ಪುನೀತ್ ಮೇಲೆ ಹಲ್ಲೆ ನಡೆಸಿದ್ದಾನೆ.
ಈ ಸಂಬಂಧ ಹಲ್ಲೆಗೊಳಗಾದ ವ್ಯಕ್ತಿ ದೂರು ಸಲ್ಲಿಸಿದ್ದು, ಪ್ರಕರಣ ದಾಖಲಾಗಿದೆ.


