ಚಿತ್ರದುರ್ಗ:- ಚಿತ್ರದುರ್ಗದ ಖಾಸಗಿ ಹೋಟೇಲ್ ಬಳಿ ತಡರಾತ್ರಿ PSI ಮೇಲೆ ಹಲ್ಲೆ ನಡೆಸಿರುವ ಘಟನೆ ಜರುಗಿದೆ. ಗುಂಪಾಗಿ ನಿಂತಿದ್ದನ್ನು ಪ್ರಶ್ನಿಸಿದ್ದಕ್ಕೆ ಈ ಕೃತ್ಯ ನಡೆದಿದೆ.
ತುರುವನೂರು ರಸ್ತೆಯಲ್ಲಿ ಮಧುಗಿರಿ ಬಿಜೆಪಿ ಜಿಲ್ಲಾಧ್ಯಕ್ಷ ಹನುಮಂತೇಗೌಡ & ಟೀಂ ತಡರಾತ್ರಿಯಲ್ಲಿ ನಿಂತಿದ್ದರು. ಆಗ ಇಷ್ಟೊತ್ತಲ್ಲಿ ರಸ್ತೆಯಲ್ಲಿ ಏನು ಮಾಡುತ್ತಿದ್ದೀರಿ ಎಂದು ಪ್ರಶ್ನಿಸಿದ ನಗರಠಾಣೆ ಪಿಎಸ್ಐ ಗಾದಿಲಿಂಗಪ್ಪ ಮೇಲೆ ಹನುಮಂತೇಗೌಡ ಹಲ್ಲೆ ನಡೆಸಿದ್ದಾರೆಂಬ ಆರೋಪ ಕೇಳಿಬಂದಿದೆ. ಅಲ್ಲದೇ ಹಲ್ಲೆ ವೇಳೆ ಪಿಎಸ್ಐ ಗಾದಿಲಿಂಗಪ್ಪ ಅವರ ಕೈಬೆರಳಿಗೆ ಗಾಯವಾಗಿದ್ದು, ಜಿಲ್ಲಾಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಹೀಗಾಗಿ ಮಧುಗಿರಿ ಬಿಜೆಪಿ ಜಿಲ್ಲಾಧ್ಯಕ್ಷ ಹನುಮಂತೇಗೌಡರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಈ ವೇಳೆ ಪೊಲೀಸರಿಂದಲೇ ನನ್ನ ಮೇಲೆ ಹಲ್ಲೆ ನಡೆದಿದೆ ಎಂದು ಹನುಮಂತೇಗೌಡ ಪ್ರತ್ಯಾರೋಪ ಮಾಡಿದ್ದಾರೆ. ಒಟ್ಟಾರೆ ಪೊಲೀಸರ ತನಿಖೆಯಿಂದ ಸತ್ಯ ಹೊರಬರಲಿದೆ.