HomeKarnataka Newsಹಿರಿಯ ಕಲಾವಿದರ ಮೇಲೆ ಹಲ್ಲೆ, ಜಾತಿ ನಿಂದನೆ: IAS ಅಧಿಕಾರಿ ಬಂಧನಕ್ಕೆ ಆಗ್ರಹ!

ಹಿರಿಯ ಕಲಾವಿದರ ಮೇಲೆ ಹಲ್ಲೆ, ಜಾತಿ ನಿಂದನೆ: IAS ಅಧಿಕಾರಿ ಬಂಧನಕ್ಕೆ ಆಗ್ರಹ!

For Dai;y Updates Join Our whatsapp Group

Spread the love

ಬೆಂಗಳೂರು:– ಹಿರಿಯ ಕಲಾವಿದರ ಮೇಲೆ ಜಾತಿನಿಂದನೆ ಹಾಗೂ ಹಲ್ಲೆಗೈದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕಿ ಕೆ.ಎಂ.ಗಾಯತ್ರಿ ಅವರನ್ನು ಕೆಲಸದಿಂದ ವಜಾಗೊಳಿಸುವಂತೆ ಆಗ್ರಹಿಸಿ ದಲಿತ ಸಂಘಟನೆಗಳ ಕಲಾವಿದರ ಒಕ್ಕೂಟವು ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಪ್ರತಿಭಟನೆ ನಡೆಸಿದೆ.

ಅಂಬೇಡ್ಕರ್ ಸೇನೆಯ ರಾಜ್ಯಾಧ್ಯಕ್ಷರು ಹಾಗೂ ನಟ, ನಿರ್ಮಾಪಕರು ಆಗಿರುವ ಪಿ. ಮೂರ್ತಿ ಅವರ ನೇತೃತ್ವದಲ್ಲಿ ಪ್ರತಿಭಟನೆ ಜರುಗಿದ್ದು, IAS ಅಧಿಕಾರಿ ಗಾಯತ್ರೀ ಅವರ ಮೇಲೆ ಕೂಡಲೇ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

ಹಿರಿಯ ಕಲಾವಿದರ ಮೇಲೆ ಹಲ್ಲೆ ನಡೆಸಿದ ಗಾಯತ್ರೀ ಹಾಗೂ ಕಳೆದ ಮಾರ್ಚ್ ನಲ್ಲಿ ಬಿಡುಗಡೆಯಾದ SC/SPTSP ಹಣವನ್ನು ಕಲಾವಿದರಿಗೆ ಬಿಡುಗಡೆ ಮಾಡದೇ ಸುಳ್ಳು ಮಾಹಿತಿ ನೀಡಿ ಕರ್ತವ್ಯ ಲೋಪ ಎಸಗಿದ ಬೆಂಗಳೂರು ವಿಭಾಗದ ಜಂಟಿ ನಿರ್ದೇಶಕರಾದ ಅಶೋಕ್. ಎನ್ ಛಲವಾದಿ ಈ ಇಬ್ಬರನ್ನು ಕೆಲಸದಿಂದ ವಜಾ ಮಾಡಿ ಬಂಧಿಸುವಂತೆ ಪ್ರತಿಭಟನಾಕಾರರು ಆಗ್ರಹಿಸಿದರು. ಈ ಸಂದರ್ಭದಲ್ಲಿ ದಲಿತ ಸಂಘಟನೆಗಳ ಮುಖಂಡರು ಸೇರಿ ಸಾಕಷ್ಟು ಮಂದಿ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!