ಅಲ್ಪಸಂಖ್ಯಾತರ ಆರ್ಥಿಕ ವ್ಯವಸ್ಥೆಯ ಮೇಲಿನ ದಾಳಿ

0
Spread the love

ವಿಜಯಸಾಕ್ಷಿ ಸುದ್ದಿ, ಗಜೇಂದ್ರಗಡ: ವಕ್ಫ್ ಕಾಯ್ದೆ ತಿದ್ದುಪಡಿ ಮಾಡುತ್ತಿರುವುದು ಧಾರ್ಮಿಕ ಸ್ವಾತಂತ್ರ‍್ಯ ಹಾಗೂ ಒಕ್ಕೂಟ ವ್ಯವಸ್ಥೆಯ ಮೇಲಿನ ದಾಳಿಯಾಗಿದ್ದು, ಸಂವಿಧಾನ ವಿರೋಧಿ ನಡೆಯಾಗಿದೆ ಎಂದು ಅಂಜುಮನ್ ಇಸ್ಲಾಂ ಕಮಿಟಿಯ ಮಾಜಿ ಕಾರ್ಯದರ್ಶಿ, ಹಾಲಿ ನಿರ್ದೇಶಕ ದಾವಲಸಾಬ ತಾಳಿಕೋಟಿ ಹೇಳಿದ್ದಾರೆ.

Advertisement

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ವಕ್ಫ್ ಕಾಯ್ದೆ ತಿದ್ದುಪಡಿಯ ನೆಪದಲ್ಲಿ ವಕ್ಫ್ ಮಂಡಳಿಗೆ ಸೇರಿದ ಎಲ್ಲ ಜಮೀನುಗಳನ್ನು ಕೇಂದ್ರ ಸರ್ಕಾರವು ಮಾರಲು ಹುನ್ನಾರ ನಡೆಸಿದಂತಿದೆ. ಆ ಮೂಲಕ ಅಲ್ಪಸಂಖ್ಯಾತರ ಆರ್ಥಿಕ ವ್ಯವಸ್ಥೆ ಮೇಲೆ ದಾಳಿ ಮಾಡಲು ಮುಂದಾಗಿದೆ.

ಅಲ್ಪಸಂಖ್ಯಾತರ ಹಕ್ಕುಗಳನ್ನು ಹತ್ತಿಕ್ಕುವ ಎಲ್ಲ ಪ್ರಯತ್ನವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಹಂತ ಹಂತವಾಗಿ ಮಾಡುತ್ತಿರುವುದು ಸ್ಪಷ್ಟವಾಗಿ ಗೋಚರಿಸುತ್ತಿದೆ. ಈ ಕಾಯ್ದೆ ತಿದ್ದುಪಡಿ ವಿರೋಧಿಸಿ ದೇಶದ ಮೂಲೆ ಮೂಲೆಗಳಲ್ಲಿ ಕೋಟ್ಯಾಂತರ ಮುಸ್ಲಿಮರು ವಕ್ಫ್ ತಿದ್ದುಪಡಿ ವಿಧೇಯಕ ವಿರೋಧಿಸಿ, ಇಮೇಲ್, ಪತ್ರದ ಮೂಲಕ, ಸರ್ಕಾರಗಳಿಗೆ ಮನವಿ, ಸಲ್ಲಿಸುವ ಮೂಲಕ ಪ್ರತಿಭಟನೆ ನಡೆಸುತ್ತಿರುವಾಗ ಅವರ ಅಹವಾಲು ಆಲಿಸದೆ ವಿಧೇಯಕವನ್ನು ಲೋಕಸಭೆಯಲ್ಲಿ ಮಂಡಿಸಿರುವುದು ಪ್ರಜಾಪ್ರಭುತ್ವಕ್ಕೆ ಎಸಗಿದ ದ್ರೋಹವಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.


Spread the love

LEAVE A REPLY

Please enter your comment!
Please enter your name here