ಬೆಳಗಾವಿ: ಅರಣ್ಯ ಇಲಾಖೆ ಅಧಿಕಾರಿಗಳ ಮೇಲೆ ಹೆಜ್ಜೆನು ದಾಳಿ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಚಾಪಗಾಂವ ಗ್ರಾಮದಲ್ಲಿ ನಡೆದಿದೆ. ಖಾನಾಪುರ ತಾಲೂಕಿನ ನಂದಗಡ ಅರಣ್ಯ ಉಪ ಅರಣ್ಯಾಧಿಕಾರಿ ಮಾಧುರಿ ದಳವಾಯಿ, ಗಸ್ತು ಪಾಲಕ ರಾಜು ಚೀತಾ ಸೇರಿದಂತೆ ಮೂವರ ಮೇಲೆ ಹೆಜ್ಜೆನುಗಳು ದಾಳಿ ನಡೆಸಿದ್ದು,
ಗಸ್ತು ತಿರುಗುವ ಸಂದರ್ಭದಲ್ಲಿ ಏಕಾಏಕಿ ರಸ್ತೆ ಮೇಲೆಯೇ ಜೇನು ನೊಣಗಳು ದಾಳಿ ನಡೆಸಿವೆ. ಜೇನು ದಾಳಿಯಿಂದ ಗಾಯಗೊಂಡ ಅರಣ್ಯ ಇಲಾಖೆ ಅಧಿಕಾರಿಗಳನ್ನು ನಂದಗಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ದಾಖಲು ಮಾಡಲಾಗಿದೆ. ಗಸ್ತು ಪಾಲಕ ಗಂಭೀರ ಹಿನ್ನೆಲೆ ಬೆಳಗಾವಿ ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದ್ದು, ನಂದಗಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.



