ಬಂಧನಕ್ಕೆ ತೆರಳಿದ್ದ ಪೊಲೀಸರ ಮೇಲೆ ದಾಳಿ: ಆರೋಪಿ ಕಾಲಿಗೆ ಗುಂಡೇಟು!

0
Spread the love

ಆನೇಕಲ್:- ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಮಾಯಸಂದ್ರದ ಬಳಿ ಪೊಲೀಸರ ಗನ್ನು ಸದ್ದು ಮಾಡಿದೆ.

Advertisement

ಬಂಧನಕ್ಕೆ ತೆರಳಿದ್ದ ವೇಳೆ ದಾಳಿ ಮಾಡಿದ ಆರೋಪಿಯ ಕಾಲಿಗೆ ಪೊಲೀಸರು ಗುಂಡೇಟು ನೀಡಿದ್ದಾರೆ. ಬೆಸ್ತಮಾನಹಳ್ಳಿ ಲೋಕೇಶ್ ಎಂಬಾತನೇ ಗುಂಡೇಟಿಗೆ ಒಳಗಾದ ಆರೋಪಿ.

ಈತ ರೌಡಿಶೀಟರ್ ಮನೋಜ್ ಎಂಬಾತನ ಮೇಲೆ ಹಲ್ಲೆ ನಡೆಸಿ ತಲೆಮರೆಸಿಕೊಂಡಿದ್ದ. ಆರೋಪಿ ಊರಿಗೆ ಬರುತ್ತಿರುವ ಮಾಹಿತಿ ಮೇರೆಗೆ ಬಂಧಿಸಲು ಜಿಗಣಿ ಇನ್ಸ್‌ಪೆಕ್ಟರ್ ಮಂಜುನಾಥ್ ನೇತೃತ್ವದಲ್ಲಿ ಪೊಲೀಸರ ತಂಡ ತೆರಳಿತ್ತು.

ಲೊಕೇಶ್ ಮಾಯಸಂದ್ರದ ಬಳಿ ನಿರ್ಮಾಣ ಆಗುತ್ತಿರುವ ರಸ್ತೆಯಲ್ಲಿ ಬರುತ್ತಿದ್ದ. ಈ ವೇಳೆ ಆತನಿಗೆ ಪೊಲೀಸರು ಶರಣಾಗುವಂತೆ ಸೂಚಿಸಿದ್ದಾರೆ. ಆದರೆ ಆರೋಪಿ ಪೊಲೀಸರ ಮಾತನ್ನು ಲೆಕ್ಕಿಸದೆ ಪೊಲೀಸ್ ಸಿಬ್ಬಂದಿ ಚೆನ್ನಬಸವ ಎಂಬವರ ಮೇಲೆ ದಾಳಿ ಮಾಡಿದ್ದಾನೆ. ಈ ವೇಳೆ ಇನ್ಸ್‌ಪೆಕ್ಟರ್ ಮಂಜುನಾಥ್ ಲೋಕೇಶ್ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here