ಬೆಂಗಳೂರು: ವಿಜಯಪುರದ ಇಟ್ಟಿಗೆ ಕಾರ್ಖಾನೆಯಲ್ಲಿ ಮೂವರು ಕಾರ್ಮಿಕರ ಮೇಲೆ ನಡೆದ ಭೀಕರ ಹಲ್ಲೆ ವಿಚಾರವಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಪ್ರತಿಕ್ರಿಯಿಸಿದ್ದು, ಸಿದ್ದರಾಮಯ್ಯ ಸರ್ಕಾರ ಬಂದ ಮೇಲೆ ಈ ರೀತಿ ಘಟನೆಗಳು ನಡೆಯುತ್ತಿವೆ. ವಿಜಯಪುರದಲ್ಲಿ ಯಾವ ರೀತಿ ಕಾರ್ಮಿಕರಿಗೆ ಥಳಿಸಿದ್ದಾರೆ ಅಂತ ನೋಡುತ್ತಿದ್ದೇವೆ. ರಾಜ್ಯ ಸರ್ಕಾರ ಯಾವ ರೀತಿ ವರ್ತಿಸುತ್ತಿದೆ. ಈ ರೀತಿ ನಡೆದುಕೊಂಡವರನ್ನು ಕೂಡಲೇ ಬಂಧನ ಮಾಡಬೇಕು ಎಂದು ಆಗ್ರಹಿಸಿದರು.
ಇನ್ನೂ ಬಿಜೆಪಿ ಮತ್ತು ಜೆಡಿಎಸ್ನ ಶಾಸಕರು ಕಾಂಗ್ರೆಸ್ಗೆ ಬರುತ್ತಾರೆಂಬ ಸಚಿವ ಎಂ. ಬಿ. ಪಾಟೀಲ್ ಹೇಳಿಕೆಗೆ ಪ್ರತಿಕ್ರಿಯಿಸಿ, “ಮುಡಾ ವಿಚಾರದಲ್ಲಿ ನಡೆದ ಘಟನೆ ಬಳಿಕ ಕಾಂಗ್ರೆಸ್ನಲ್ಲೇ ಸಿಎಂ ಆಗುವುದಕ್ಕೆ ನಡೆಯುತ್ತಿರುವ ಗುದ್ದಾಟವನ್ನು ನಾವು ನೋಡುತ್ತಿದ್ದೇವೆ. ಇದರ ನಡುವೆ ಬಿಜೆಪಿ, ಜೆಡಿಎಸ್ ಪಕ್ಷದ ಶಾಸಕರನ್ನು ಅವರ ಪಕ್ಷಕ್ಕೆ ಸೇರಿಸಿಕೊಂಡು ಏನು ಮಾಡುತ್ತಾರೆ” ಎಂದು ಪ್ರಶ್ನಿಸಿದರು.