ಮಂಡ್ಯ :- ಕಾಶ್ಮೀರದಲ್ಲಿ ಅಮಾಯಕರ ಮೇಲೆ ಉಗ್ರರು ನಡೆಸಿದ ದಾಳಿ ಖಂಡನೀಯ ಎಂದು ಶಾಸಕ ಕೆ.ಎಂ.ಉದಯ್ ಹೇಳಿದ್ದಾರೆ.
ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಕಾಶ್ಮೀರದ ಪಹಲ್ಗಾಮ್‌ನಲ್ಲಿ ಉಗ್ರರು ನಡೆಸಿದ ದಾಳಿಯಲ್ಲಿ 28 ಮಂದಿ ಮುಗ್ಧ ನಾಗರಿಕರು ಬಲಿಯಾಗಿದ್ದಾರೆ. ಇದು ಸಹಿಸಲು ಅಸಾಧ್ಯವಾದ ಕೃತ್ಯವಾಗಿದೆ. ಹೀಗಾಗಿ ನರರಾಕ್ಷಕರಿಗೆ ತಕ್ಷ ಶಿಕ್ಷೆ ಆಗಬೇಕು. ಇಂತಹ ಅಹಿತಕರ ಘಟನೆಗಳು ಮರುಕಳಿಸದಂತೆ ಕೇಂದ್ರ ಸರ್ಕಾರ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಕ್ಷೇತ್ರ ವ್ಯಾಪ್ತಿಯಲ್ಲಿ ಈಗಾಗಲೇ ನೂರಾರು ಕೋಟಿ ರೂ ವೆಚ್ಚದಲ್ಲಿ ನೀರಾವರಿ, ಕೆರೆ ಅಭಿವೃದ್ಧಿ, ಗ್ರಾಮೀಣ ಭಾಗದ ರಸ್ತೆಗಳು, ಇನ್ನಿತರ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಲಾಗುತ್ತಿದ್ದು, ಬೇಸಿಗೆ ಕಾಲ ಮುಗಿಯುವುದರೊಳಗೆ ದುಸ್ಥಿತಿಯಲ್ಲಿರುವ ಶಾಲಾ ಕೊಠಡಿಗಳನ್ನು ಹಂತ ಹಂತವಾಗಿ ಅಭಿವೃದ್ಧಿಗೊಳಿಸಿ ಶಾಲಾ ಮಕ್ಕಳ ವಿದ್ಯಾಭ್ಯಾಸಕ್ಕೆ ಅನುವು ಮಾಡಿಕೊಡಲಾಗುವುದು ಎಂದು ಅಭಯ ನೀಡಿದರು.