ಕಾರವಾರ:- ಸ್ಥಳ ಮಹಜರು ವೇಳೆ ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದ ಇಬ್ಬರು ಆರೋಪಿಗಳ ಕಾಲಿಗೆ ಪೊಲೀಸರು ಫೈರಿಂಗ್ ಮಾಡಿರುವ ಘಟನೆ ಕಾರವಾರದಲ್ಲಿ ಜರುಗಿದೆ.
Advertisement
ಅಂಕೋಲಾ ಪೊಲೀಸರಿಂದ ಮಂಗಳೂರು ಮೂಲದ ತಲ್ಲತ್ತ ಮತ್ತು ನವಫಾಲ್ ಎಂಬ ಆರೋಪಿಗಳ ಕಾಲಿಗೆ ಗುಂಡು ಹಾರಿಸಲಾಗಿದೆ. ಈ ಇಬ್ಬರು ಜ.29 ರಂದು ರಾಮನಗುಳಿ ಬಳಿಯ ರಾಷ್ಟ್ರೀಯ ಹೆದ್ದಾರಿ ಬಳಿ ಪತ್ತೆಯಾಗಿದ್ದ ಕಾರಿನಲ್ಲಿ ಸಿಕ್ಕ ಒಂದು ಕೋಟಿ ರೂ. ಪ್ರಕರಣದಲ್ಲಿ ಬಂಧಿತರಾಗಿದ್ದರು.
ಸ್ಥಳ ಮಹಜರಿಗಾಗಿ ಆರೋಪಿಗಳನ್ನ ಅಂಕೋಲಾ ಕಡೆ ಕರೆದೊಯ್ಯಲಾಗುತ್ತಿತ್ತು. ಈ ವೇಳೆ ಆರೋಪಿಗಳು ಪೊಲೀಸರ ಮೇಲೆ ದಾಳಿಗೆ ಯತ್ನಿಸಿದ್ದು, ಆತ್ಮರಕ್ಷಣೆಗಾಗಿ ಆರೋಪಿಗಳ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ.
ಘಟನೆಯಲ್ಲಿ ಮೂವರು ಪೊಲೀಸರ ಕಾಲಿಗೆ ಮತ್ತು ತಲೆಗೆ ಗಾಯವಾಗಿದೆ. ಗಾಯಾಳುಗಳನ್ನ ಹಳಿಯಾಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.