ಪಬ್‌ʼನಲ್ಲಿ ಯುವತಿಯ ಮೇಲೆ ಅತ್ಯಾಚಾರಕ್ಕೆ ಯತ್ನ: ನಾಲ್ವರು ಅರೆಸ್ಟ್

0
Spread the love

ಮಂಗಳೂರು: ಪಬ್‌ʼನಲ್ಲಿ ಯುವತಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ನಾಲ್ವರನ್ನು ಅರೆಸ್ಟ್‌ ಮಾಡಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಬಂಧಿತ ಆರೋಪಿಗಳನ್ನು ಪುತ್ತೂರಿನ ವಿನಯ್(33), ಮಹೇಶ್ (27), ಪ್ರಿತೇಶ್ (34) ಹಾಗೂ ನಿತೇಶ್ (33) ಎಂದು ಗುರುತಿಸಲಾಗಿದೆ. ಮಂಗಳೂರಿನ ಪಾಂಡೇಶ್ವರದ ಮಾಲ್ ಒಂದರಲ್ಲಿರುವ ಪಬ್‍ನಲ್ಲಿ ಯುವತಿಯ ಮಾನಭಂಗಕ್ಕೆ ಆರೋಪಿಗಳು ಯತ್ನಿಸಿ, ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಲಾಗಿದೆ.

Advertisement

ಸ್ನೇಹಿತೆಯೊಂದಿಗೆ ಪಬ್‍ಗೆ ಬಂದಿದ್ದ ವೇಳೆ ಪುಂಡರು ಯುವತಿಗೆ ಕಿರುಕುಳ ನೀಡಿದ್ದಾರೆ. ಅಲ್ಲದೇ ಅವಾಚ್ಯ ಶಬ್ದಗಳಿಂದ ಬೈದು ಬಿಯರ್ ಬಾಟಲಿಯಿಂದ ಹಲ್ಲೆ ನಡೆಸಲು ಯತ್ನಿಸಿದ್ದಾರೆ ಎಂದು ಯುವತಿ ದೂರಿನಲ್ಲಿ ತಿಳಿಸಿದ್ದಾಳೆ. ಈ ಸಂಬಂಧ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.


Spread the love

LEAVE A REPLY

Please enter your comment!
Please enter your name here