ಚಾಮರಾಜನಗರ:- ಕಾಲೇಜು ವಿದ್ಯಾರ್ಥಿಗಳಿಗೆ ಡ್ರಗ್ಸ್ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪಿಯನ್ನು ಸೆನ್ ಅಪರಾಧಿ ಪೊಲೀಸರು ಸೋಮವಾರ ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ರಾಮನಗರದ ಪ್ರಜ್ವಲ್ @ ಪ್ರಜ್ಜು(೨೨) ಬಂಧಿತ ಆರೋಪಿಯಾಗಿದ್ದು, ಬಂಧಿತನಿಂದ ೫.೧೪ ಗ್ರಾಂ ನ ಸುಮಾರು ೬೦ ಸಾವಿರ ಮೌಲ್ಯದ ಡ್ರಗ್ಸ್ ಅನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.
ಈತ ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದು, ಮೈಸೂರಿನ ಖಾಸಗಿ ಕಾಲೇಜು ಬಳಿ ಅಪರಿಚಿತ ವ್ಯಕ್ತಿಯೋರ್ವ ಇದನ್ನು ನೀಡಿದ್ದು, ಇದನ್ನು ಕಾಲೇಜು ವಿದ್ಯಾರ್ಥಿಗಳಿಗೆ ಮಾರಾಟ ಮಾಡಲು ತಂದಿದ್ದನು ಎಂಬುದು ಪೊಲೀಸ್ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಈ ಸಂಬಂಧ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ



