ಹೊಸಕೋಟೆ: ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಆರು ಮಂದಿ ಆರೋಪಿಗಳನ್ನು ಹೊಸಕೋಟೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ಸುಮಾರು 8 ಕೆ.ಜಿ. 750 ಗ್ರಾಂ ಗಾಂಜಾ ಸೇರಿದಂತೆ ಕೃತ್ಯಕ್ಕೆ ಬಳಸಿದ್ದ ಎರಡು ಬೈಕ್ಗಳು ಹಾಗೂ ಏಳು ಮೊಬೈಲ್ಗಳನ್ನು ವಶಪಡಿಸಿಕೊಳ್ಳಲಾಗಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಜಡಿಗೇನಹಳ್ಳಿ ಹೋಬಳಿಯ ನಿಡಘಟ್ಟ ಗೇಟ್ ಬಳಿ ಗಾಂಜಾ ಮಾರಾಟಕ್ಕೆ ಯತ್ನಿಸಲಾಗುತ್ತಿತ್ತು. ಈ ಕುರಿತು ಖಚಿತ ಮಾಹಿತಿ ಪಡೆದ ಪೊಲೀಸರು ಡಿವೈಎಸ್ಪಿ ಮಲ್ಲೇಶಯ್ಯ ನೇತೃತ್ವದಲ್ಲಿ ದಾಳಿ ನಡೆಸಿ ಆರು ಮಂದಿಯನ್ನು ಬಂಧಿಸಿದ್ದಾರೆ.
ಬಂಧಿತರನ್ನು ಪ್ರವೀಣ್, ಅಕ್ಷಯ್, ಉತ್ತಮ್ ಅಲಿಯಾಸ್ ಶಿವು, ಅಭಿ ಹಾಗೂ ಮನೋಹರ್ ಎಂದು ಗುರುತಿಸಲಾಗಿದೆ. ಆರೋಪಿಗಳು ಬೆಂಗಳೂರು ನಗರ, ಹೊಸಕೋಟೆ ಹಾಗೂ ಹಾಸನ ಮೂಲದವರು ಎಂದು ತಿಳಿದುಬಂದಿದೆ.
ದಾಳಿ ವೇಳೆ ಆರೋಪಿಗಳಿಂದ 8 ಕೆ.ಜಿ. 750 ಗ್ರಾಂ ಗಾಂಜಾ, ಎರಡು ಬೈಕ್ಗಳು ಹಾಗೂ ಏಳು ಮೊಬೈಲ್ಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಈ ಸಂಬಂಧ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.









