ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ, ಅಕ್ರಮವಾಗಿ ಹೈಡ್ರೋಪೋನಿಕ್ ಗಾಂಜಾ ಸಾಗಿಸಲು ಯತ್ನಿಸಿದ ಪ್ರಯಾಣಿಕನನ್ನು ವಶಕ್ಕೆ ಪಡೆದಿದ್ದಾರೆ.
ಬ್ಯಾಂಕಾಕ್ನಿಂದ ಬೆಂಗಳೂರಿಗೆ ಬಂದಿದ್ದ ಪ್ರಯಾಣಿಕನೊಬ್ಬ ತನ್ನ ಶೂನಲ್ಲಿ ಹೈಡ್ರೋಪೋನಿಕ್ ಗಾಂಜಾವನ್ನು ಅಡಗಿಸಿಟ್ಟು ಸಾಗಿಸಲು ಯತ್ನಿಸಿದ್ದಾನೆ ಎನ್ನಲಾಗಿದೆ. ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರನ್ನು ತಪಾಸಣೆ ನಡೆಸುವ ವೇಳೆ ಅಧಿಕಾರಿಗಳಿಗೆ ಅನುಮಾನ ಮೂಡಿದೆ. ಬಳಿಕ ಪರಿಶೀಲಿಸಿದಾಗ ಶೂನಲ್ಲಿ ಅಡಗಿಸಿಟ್ಟಿದ್ದ ಸುಮಾರು 500 ಗ್ರಾಂ ಹೈಡ್ರೋಪೋನಿಕ್ ಗಾಂಜಾ ಪತ್ತೆಯಾಗಿದೆ.
ವಶಪಡಿಸಿಕೊಂಡ ಗಾಂಜಾದ ಅಂದಾಜು ಮೌಲ್ಯ ₹17.5 ಲಕ್ಷ ಎಂದು ತಿಳಿದುಬಂದಿದೆ. ಕಸ್ಟಮ್ಸ್ ಅಧಿಕಾರಿಗಳು ಗಾಂಜಾವನ್ನು ವಶಪಡಿಸಿಕೊಂಡಿದ್ದು, ಆರೋಪಿಯನ್ನು ವಿಚಾರಣೆಗೆ ಒಳಪಡಿಸಿದ್ದಾರೆ.
ಬ್ಯಾಂಕಾಕ್ನಿಂದ ಬೆಂಗಳೂರಿಗೆ ಮಾದಕ ವಸ್ತು ಸಾಗಿಸಲು ಯತ್ನಿಸಿದ ಪ್ರಕರಣದ ಹಿಂದೆ ಬೇರೆ ಯಾರಾದರೂ ಇದ್ದಾರೆಯೇ ಎಂಬ ಬಗ್ಗೆ ಅಧಿಕಾರಿಗಳು ತನಿಖೆ ಮುಂದುವರಿಸಿದ್ದಾರೆ.










