ಬೆಂಗಳೂರು:– ವ್ಯಕ್ತಿಯೋರ್ವ ಲಾಂಗ್ ಹಿಡಿದು ಕ್ಯಾಬ್ ಚಾಲಕರ ಮೇಲೆ ಹಲ್ಲೆಗೆ ಯತ್ನಿಸಿದ ಘಟನೆ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಜರುಗಿದೆ.
ಕೂಡಲೇ CISF ಸಿಬ್ಬಂದಿ ಹಲ್ಲೆ ನಡೆಸಲು ಯತ್ನಿಸಿದ ಸುನಿಲ್ ಎಂಬ ವ್ಯಕ್ತಿಯನ್ನು ಅರೆಸ್ಟ್ ಮಾಡಿದ್ದಾರೆ. ಕ್ಯಾಬ್ ಚಾಲಕರಿಬ್ಬರ ಮೇಲೆ ಹಲ್ಲೆಗೆ ಮುಂದಾದ ಆರೋಪಿಯನ್ನು CISF ಸಿಬ್ಬಂದಿ ತಕ್ಷಣ ವಶಕ್ಕೆ ಪಡೆದು ವಿಮಾನ ನಿಲ್ದಾಣ ಪೊಲೀಸ್ ಠಾಣೆಗೆ ಒಪ್ಪಿಸಿದ್ದಾರೆ.
ಪೊಲೀಸರ ಪ್ರಾಥಮಿಕ ವಿಚಾರಣೆಯಲ್ಲಿ, ಹಳೆ ವೈಷಮ್ಯದಿಂದಲೇ ಹಲ್ಲೆಗೆ ಯತ್ನಿಸಿದ್ದಾಗಿ ಆರೋಪಿಯು ಒಪ್ಪಿಕೊಂಡಿರುವ ಮಾಹಿತಿ ತಿಳಿದುಬಂದಿದೆ. ಘಟನೆ ನವೆಂಬರ್ 16ರಂದು ನಡೆದಿದೆ. ಪ್ರಕರಣವನ್ನು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಪೊಲೀಸ್ ಠಾಣೆಯಲ್ಲಿ ದಾಖಲಿಸಲಾಗಿದೆ.



