ರಾಮನಗರ: ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದ್ದ ಆರೋಪಿಗಳ ಮೇಲೆ ಕನಕಪುರ ನಗರ ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ.
Advertisement
ಹೌದು ಕಳೆದ ವಾರ ಕನಕಪುರ ತಾಲೂಕಿನ ಮಳಗಾಳು ಗ್ರಾಮದ ದಲಿತ ಯುವಕ ಅನೀಶ್ ಅವರ ಎಡಗೈ ಕತ್ತರಿಸಿ ಈ ರೌಡಿ ಶೀಟರ್‌ಗಳು ಪರಾರಿಯಾಗಿದ್ದರು. ಆರೋಪಿಗಳ ಬಂಧಿಸುವಂತೆ ದಲಿತ ಸಂಘಟನೆಗಳು ಪ್ರತಿಭಟನೆ ನಡೆಸಿದ್ದವು.
ಇಂದು ಖಚಿತ ಮಾಹಿತಿ ಪಡೆದು ಪೊಲೀಸರು ಆರೋಪಿಗಳನ್ನು ಬಂಧಿಸಲು ತೆರಳಿದ್ದರು. ಈ ವೇಳೆ ಪೊಲೀಸರ ಮೇಲೆ ಹಲ್ಲೆ ಮಾಡಿ ಆರೋಪಿಗಳು ಪರಾರಿಯಾಗಲು ಯತ್ನಿಸಿದ್ದರು.
ಈ ವೇಳೆ ಕಗ್ಗಲೀಪುರದ ವ್ಯಾಲಿ ಸ್ಕೂಲ್ ರೋಡ್ ಬಳಿ ಆರೋಪಿಗಳ ಕಾಲಿಗೆ ಪೊಲೀಸರು ಗುಂಡು ಹೊಡೆದಿದ್ದಾರೆ. ಹರ್ಷ ಅಲಿಯಾಸ್ ಕೈಮ, ಕರುಣೇಶ್ ಅಲಿಯಾಸ್ ಕಣ್ಣ ಮೇಲೆ ಗುಂಡಿನ ದಾಳಿ ನಡೆಸಿ ಬಂಧಿಸಿದ್ದಾರೆ. ಆರೋಪಿಗಳನ್ನ ಸ್ಥಳೀಯ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ನೀಡಲಾಗುತ್ತಿದೆ.