ಬೆಂಗಳೂರು:– ಡಿಸಿಎಂ ‘ಬೆಂಗಳೂರು ನಡಿಗೆ’ ಕಾರ್ಯಕ್ರಮದ ಬಗ್ಗೆ ಬಿಜೆಪಿ ಶಾಸಕ ಡಾ.ಸಿ.ಎನ್. ಅಶ್ವತ್ಥ್ ನಾರಾಯಣ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಜನರ ಮಧ್ಯದಲ್ಲಿ ಹೋಗುತ್ತಿರುವುದು ಒಳ್ಳೆಯ ಬೆಳವಣಿಗೆ. ಆದರೆ ಸರಕಾರಿ ಕಾರ್ಯಕ್ರಮಗಳಲ್ಲಿ ವೈಮನಸ್ಸು ತೋರಿಸಬಾರದು. ಚುನಾಯಿತ ಪ್ರತಿನಿಧಿ ಹಕ್ಕು ಕಸಿಯಬಾರದು ಎಂದಿದ್ದಾರೆ. ಬೆಂಗಳೂರು ನಡಿಗೆ ಕಾರ್ಯಕ್ರಮದ ಅಂಗವಾಗಿ ಮತ್ತಿಕೆರೆಯ ಜೆಪಿ ಪಾರ್ಕ್ನಲ್ಲಿ ನಡೆದ ಹೈಡ್ರಾಮಾ ವಿಚಾರವಾಗಿಯೂ ಪ್ರತಿಕ್ರಿಯಿಸಿದ ಅವರು, ಶಾಸಕ ಮುನಿರತ್ನ ಮೇಲೆ ದಾಳಿಗೆ ಯತ್ನಿಸಿದವರನ್ನು ತಕ್ಷಣ ಬಂಧಿಸಬೇಕು.
ಕಾಂಗ್ರೆಸ್ ಪಕ್ಷದ ದೌರ್ಜನ್ಯ, ಅಟ್ಟಹಾಸ ಮಿತಿ ಮೀರುತ್ತಿದೆ. ಗೂಂಡಾಗಿರಿ ಮಾಡುವ ಪ್ರವೃತ್ತಿಯನ್ನು ನಾವು ಒಪ್ಪುವುದಿಲ್ಲ. ಚುನಾಯಿತ ಪ್ರತಿನಿಧಿ ಮೇಲೆ ಹಲ್ಲೆ ಯತ್ನ ನಡೆಸಲಾಗುತ್ತೆ ಎಂದರೆ ಸರಕಾರ ಬದುಕಿದೆಯೋ, ಇಲ್ಲವೋ ಎಂಬ ಪ್ರಶ್ನೆ ಮೂಡುತ್ತೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.



