• About
  • Advertise
  • Privacy & Policy
  • Contact
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
No Result
View All Result
No Result
View All Result
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home Karnataka News

ಉತ್ತರ ಕರ್ನಾಟಕದಲ್ಲಿ ಡಿಫೆನ್ಸ್ ಕಾರಿಡಾರ್‍ಗೆ ಯತ್ನ: ಸಚಿವ ಎಂ.ಬಿ. ಪಾಟೀಲ್

Vijaya Sakshi by Vijaya Sakshi
December 12, 2025
in Karnataka News
0
ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ: ಎಂಬಿ ಪಾಟೀಲ್
0
SHARES
0
VIEWS
Share on FacebookShare on Twitter

ಬೆಳಗಾವಿ: ಬೆಳಗಾವಿ, ವಿಜಯಪುರ, ಧಾರವಾಡ ಒಳಗೊಂಡಂತೆ ಉತ್ತರ ಕರ್ನಾಟಕದಲ್ಲಿ ಡಿಫೆನ್ಸ್ ಕಾರಿಡಾರ್ ನಿರ್ಮಾಣಕ್ಕೆ ಸರ್ಕಾರ ಪ್ರಯತ್ನ ನಡೆಸಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಭೂತ ಸೌಲಭ್ಯ ಅಭಿವೃದ್ಧಿ ಸಚಿವ ಎಂ.ಬಿ. ಪಾಟೀಲ್ ಅವರು ಹೇಳಿದರು.

ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲದ ಅಧಿವೇಶನದ ವಿಧಾನಸಭೆಯ ಪ್ರಶ್ನೋತ್ತರ ಕಲಾಪದಲ್ಲಿ ಶುಕ್ರವಾರ ಹುಬ್ಬಳ್ಳಿ-ಧಾರವಾಡ ಪಶ್ಚಿಮ ಕ್ಷೇತ್ರದ ಶಾಸಕ ಅರವಿಂದ ಬೆಲ್ಲದ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಸಚಿವರು, ದೇಶದ ಏರೋಸ್ಪೇಸ್ ಹಾಗೂ ಡಿಫೆನ್ಸ್ ಕ್ಷೇತ್ರಕ್ಕೆ ನಮ್ಮ ರಾಜ್ಯ ಶೇ. 65 ರಷ್ಟು ಕೊಡುಗೆ ನೀಡುತ್ತಿದೆ. ನಮ್ಮ ರಾಜ್ಯವನ್ನು ಎಕೋ ಸ್ಪೇಸ್ ನಲ್ಲಿಯೂ ಮುಂಚೂಣಿ ರಾಜ್ಯವನ್ನಾಗಿ ಪರಿಗಣಿಸಲಾಗಿದೆ. ಬೆಳಗಾವಿ,

ವಿಜಯಪುರ, ಧಾರವಾಡ ಒಳಗೊಂಡ ಪ್ರದೇಶದಲ್ಲಿ ಬಹುಮುಖ್ಯವಾದ ಡಿಫೆನ್ಸ್ ಕಾರಿಡಾರ್ ನಿರ್ಮಾಣಕ್ಕಾಗಿ ಮುಖ್ಯಮಂತ್ರಿಗಳು ಹಾಗೂ ನಾವು ನಿಯೋಗದೊಂದಿಗೆ ತೆರಳಿ ಕೇಂದ್ರ ರಕ್ಷಣಾ ಸಚಿವರಾದ ರಾಜನಾಥ್ ಸಿಂಗ್ ಅವರನ್ನು ಭೇಟಿಯಾಗಿ ಡಿಫೆನ್ಸ್ ಕಾರಿಡಾರ್ ನಿರ್ಮಾಣಕ್ಕಾಗಿ ಬೇಡಿಕೆ ಸಲ್ಲಿಸಲಾಗಿದ್ದು, ಅವರೂ ಕೂಡ ಈ ಕುರಿತು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಈ ನಿಟ್ಟಿನಲ್ಲಿ ಸರ್ವ ಪಕ್ಷ ಶಾಸಕರುಗಳು ಬೆಂಬಲವಾಗಿ ನಿಂತು, ಈ ಯೋಜನೆ ಸಾಕಾರಗೊಳಿಸಬೇಕಿದೆ ಎಂದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲ್ಲೂಕಿನಲ್ಲಿ ಸ್ಥಾಪಿಸಲು ಉದ್ದೇಶಿಸಿದ್ದ ಏರೋಸ್ಪೇಸ್ ಪಾರ್ಕ್ ನಿರ್ಮಾಣ ಸಂಬಂಧಿಸಿದಂತೆ, 13 ಗ್ರಾಮಗಳಿಂದ 1,777 ಎಕರೆ ಭೂಮಿಯನ್ನು ಭೂಸ್ವಾಧೀನ ಮಾಡಿಕೊಳ್ಳುವ ಪ್ರಕ್ರಿಯೆಯಿಂದ ಕೈಬಿಡಲು, ಕಳೆದ ಡಿ. 06 ರಂದು ಅಧಿಸೂಚನೆ ಹೊರಡಿಸಿದ್ದು, ಈ ಸಂಪೂರ್ಣ ಪ್ರದೇಶವನ್ನು ಹಸಿರು ವಲಯವನ್ನಾಗಿ ಮುಂದುವರೆಸುವ ಸಲುವಾಗಿ ವಿಶೇಷ ಕೃಷಿ ವಲಯ ಎಂದು ಘೋಷಿಸಲಾಗಿದೆ.

ಬೆಳಗಾವಿ ಜಿಲ್ಲೆಯಲ್ಲಿ ಈಗಾಗಲೆ ಮೆ: ಏಕಸ್ ಎಸ್.ಇ.ಝೆಡ್ ಪ್ರೈ.ಲಿ. ಅವರು ಏರೋಸ್ಪೇಸ್ ಕಾಂಪೋನೆಂಟ್‍ಗಳ ಎಸ್.ಇ.ಝೆಡ್ ಸ್ಥಾಪಿಸಿದ್ದು, ಯಶಸ್ವಿಯಾಗಿ ಕಾರ್ಯ ನಿರ್ವಹಿಸುತ್ತಿದೆ. ಹೀಗಾಗಿ ಬೆಳಗಾವಿ ಜಿಲ್ಲೆಯಲ್ಲಿ ಏರೋಸ್ಪೇಸ್ ಕಾಂಪೋನೆಂಟ್‍ಗಳ ತಯಾರಿಕೆಯಲ್ಲಿ ಎಕೋ ಸಿಸ್ಟಂ ಅಭಿವೃದ್ಧಿಯಾಗಿದ್ದು, ಜಿಲ್ಲೆಯಲ್ಲಿ ಈ ವಲಯದಲ್ಲಿ ಬಂಡವಾಳ ಆಕರ್ಷಿಸಲು ವಿಪುಲ ಅವಕಾಶಗಳಿವೆ.

ಬೆಂಗಳೂರು-ಮುಂಬೈ ಇಂಡಸ್ಟ್ರಿಯಲ್ ಕಾರಿಡಾರ್ ಯೋಜನೆಯಡಿ ಧಾರವಾಡ ಜಿಲ್ಲೆಯಲ್ಲಿ ಅಂದಾಜು 3 ಸಾವಿರ ಎಕರೆ ಪ್ರದೇಶದಲ್ಲಿ ಕೈಗಾರಿಕಾ ಪ್ರದೇಶ ಅಭಿವೃದ್ಧಿಪಡಿಸುತ್ತಿದ್ದು, ಈ ಪ್ರದೇಶದಲ್ಲಿ ಏರೋಸ್ಪೇಸ್ ಕಾಂಪೋನೆಂಟ್‍ಗಳ ತಯಾರಿಕಾ ಘಟಕಗಳಿಗೆ ಅಗತ್ಯ ಭೂಮಿ ಮತ್ತು ಮೂಲಭೂತ ಸೌಕರ್ಯಗಳನ್ನು ಒದಗಿಸಲು ಕ್ರಮ ವಹಿಸಲಾಗಿದೆ.

ಇದರ ಜೊತೆಗೆ ಇದೇ ರೀತಿ ಉತ್ತರ ಕರ್ನಾಟಕದಲ್ಲಿ ಏರೋಸ್ಪೇಸ್ ಕಾಂಪೋನೆಂಟ್ ತಯಾರಿಕಾ ಘಟಕಗಳನ್ನು ಸ್ಥಾಪಿಸಲು ಮುಂದೆ ಬರುವವರಿಗೆ ಅಗತ್ಯ ಬೆಂಬಲ ಹಾಗೂ ಆಕರ್ಷಕ ರಿಯಾಯಿತಿ ಮತ್ತು ಪ್ರೋತ್ಸಾಹ ಒದಗಿಸಲು ನಾವು ಸಿದ್ಧರಿದ್ದೇವೆ. ಹೊಸ ಕೈಗಾರಿಕಾ ನೀತಿಯಡಿ ನಂಜುಂಡಪ್ಪ ವರದಿಯಲ್ಲಿ ಅತಿ ಹಿಂದುಳಿದ ತಾಲ್ಲೂಕುಗಳು ಎಂದು ಘೋಷಿಸಲಾಗಿರುವ ಪ್ರದೇಶಗಳಲ್ಲಿ ಕೈಗಾರಿಕೆ ಸ್ಥಾಪಿಸ ಬಯಸುವವರಿಗೆ ಪ್ರೋತ್ಸಾಹ ಜೊತೆಗೆ ಹೆಚ್ಚುವರಿಯಾಗಿ ಶೇ. 3 ರಿಂದ 5 ರಷ್ಟು ವಿಶೇಷ ನೆರವು ನೀಡಲಾಗುತ್ತಿದೆ ಎಂದು ಸಚಿವ ಎಂ.ಬಿ. ಪಾಟೀಲ್ ಹೇಳಿದರು.

Tags: belagavi sessionBreakingkannadanewsKarnatakaMB PatilNewsHeadlinesVijayasakshivijayasakshinews
Previous Post

 ಘೋರ ದುರಂತ: ಗಿಳಿ ರಕ್ಷಿಸಲು ಹೋಗಿ ವಿದ್ಯುತ್ ತಂತಿ ತಗುಲಿ ಯುವಕ ಸಾವು!

Next Post

ನೇಕಾರರಿಗೆ ಸಿಹಿಸುದ್ದಿ: ಉಚಿತ ವಿದ್ಯುತ್ ಬೇಡಿಕೆ ಮನವಿ ಪರಿಶೀಲನೆ – ಶಿವಾನಂದ ಪಾಟೀಲ್ ಭರವಸೆ

Vijaya Sakshi

Vijaya Sakshi

Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

Next Post
ನೇಕಾರರಿಗೆ ಸಿಹಿಸುದ್ದಿ: ಉಚಿತ ವಿದ್ಯುತ್ ಬೇಡಿಕೆ ಮನವಿ ಪರಿಶೀಲನೆ – ಶಿವಾನಂದ ಪಾಟೀಲ್ ಭರವಸೆ

ನೇಕಾರರಿಗೆ ಸಿಹಿಸುದ್ದಿ: ಉಚಿತ ವಿದ್ಯುತ್ ಬೇಡಿಕೆ ಮನವಿ ಪರಿಶೀಲನೆ - ಶಿವಾನಂದ ಪಾಟೀಲ್ ಭರವಸೆ

Leave a Reply Cancel reply

Your email address will not be published. Required fields are marked *

Stay Connected test

  • 24k Followers
  • 99 Subscribers
  • Trending
  • Comments
  • Latest
ಕೃಷಿ ಹೊಂಡದಲ್ಲಿ ಮಹಿಳೆಯ ಶವ ಪತ್ತೆ ಪ್ರಕರಣಕ್ಕೆ ಟ್ವಿಸ್ಟ್‌: ಎರಡೂವರೆ ತಿಂಗಳ ಬಳಿಕ ಆರೋಪಿ ಅರೆಸ್ಟ್‌

ಕೃಷಿ ಹೊಂಡದಲ್ಲಿ ಮಹಿಳೆಯ ಶವ ಪತ್ತೆ ಪ್ರಕರಣಕ್ಕೆ ಟ್ವಿಸ್ಟ್‌: ಎರಡೂವರೆ ತಿಂಗಳ ಬಳಿಕ ಆರೋಪಿ ಅರೆಸ್ಟ್‌

October 21, 2026
Gadaga Breaking: 2.80 ಲಕ್ಷದ ಹಣಕ್ಕಾಗಿ ಸ್ನೇಹಿತನ ಹತ್ಯೆ? 11 ದಿನಗಳ ಬಳಿಕ ಬಯಲಾಯ್ತು ಕೊಲೆ ರಹಸ್ಯ!

Gadaga Breaking: 2.80 ಲಕ್ಷದ ಹಣಕ್ಕಾಗಿ ಸ್ನೇಹಿತನ ಹತ್ಯೆ? 11 ದಿನಗಳ ಬಳಿಕ ಬಯಲಾಯ್ತು ಕೊಲೆ ರಹಸ್ಯ!

October 21, 2026

ಸೊಲ್ಲಾಪುರದಿಂದ ಗಾಂಜಾ ಪೂರೈಕೆ, ಗದಗದಲ್ಲಿ ಮಾರಾಟ: ಗಂಗಿಮಡಿಯ ಇಬ್ಬರು ಸೇರಿ ನಾಲ್ವರ ಬಂಧನ

October 18, 2026

ದಸರಾ ಹಬ್ಬದ ದಿನವೇ ಖಾಸಗಿ ಶಾಲಾ ಶಿಕ್ಷಕಿ ಸಾವು! ತುಂಗಭದ್ರಾ ಹಿನ್ನೀರಿನಲ್ಲಿ ಮೃತದೇಹ ಪತ್ತೆ

October 20, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0
ಶಿವಮೊಗ್ಗ ದಸರಾ ಆನೆ ಬೆದರಿದ ಘಟನೆ ಬೆನ್ನಲ್ಲೇ ಎಚ್ಚೆತ್ತ ಅರಣ್ಯ ಇಲಾಖೆ: ಮುಂದಿನ ವರ್ಷದಿಂದ ಕಡ್ಡಾಯ ತಾಲೀಮು!

ಶಿವಮೊಗ್ಗ ದಸರಾ ಆನೆ ಬೆದರಿದ ಘಟನೆ ಬೆನ್ನಲ್ಲೇ ಎಚ್ಚೆತ್ತ ಅರಣ್ಯ ಇಲಾಖೆ: ಮುಂದಿನ ವರ್ಷದಿಂದ ಕಡ್ಡಾಯ ತಾಲೀಮು!

October 21, 2026
ದುರ್ಗಾ ಮೂರ್ತಿ ವಿಸರ್ಜನೆ ವೇಳೆ ಭೀಕರ ದುರಂತ: ವಿದ್ಯುತ್ ತಂತಿ ತಗುಲಿ ಮೂವರು ಸಾವು

ದುರ್ಗಾ ಮೂರ್ತಿ ವಿಸರ್ಜನೆ ವೇಳೆ ಭೀಕರ ದುರಂತ: ವಿದ್ಯುತ್ ತಂತಿ ತಗುಲಿ ಮೂವರು ಸಾವು

October 21, 2026
ದಸರಾ ರಜೆ ಮುಗಿಸಿ ಬೆಂಗಳೂರಿಗೆ ವಾಪಸ್: ನೆಲಮಂಗಲ ಬೈಪಾಸ್‌ನಲ್ಲಿ ಕಿಲೋಮೀಟರ್‌ಗಟ್ಟಲೆ ಟ್ರಾಫಿಕ್ ಜಾಮ್!

ದಸರಾ ರಜೆ ಮುಗಿಸಿ ಬೆಂಗಳೂರಿಗೆ ವಾಪಸ್: ನೆಲಮಂಗಲ ಬೈಪಾಸ್‌ನಲ್ಲಿ ಕಿಲೋಮೀಟರ್‌ಗಟ್ಟಲೆ ಟ್ರಾಫಿಕ್ ಜಾಮ್!

October 21, 2026
ದಸರಾ ರಜೆ ವಿಸ್ತರಣೆ: ದಕ್ಷಿಣ ಕನ್ನಡ ಜಿಲ್ಲೆಯ ಶಾಲೆಗಳಿಗೆ ನಾಳೆ ರಜೆ ಘೋಷಣೆ!

ದಸರಾ ರಜೆ ವಿಸ್ತರಣೆ: ದಕ್ಷಿಣ ಕನ್ನಡ ಜಿಲ್ಲೆಯ ಶಾಲೆಗಳಿಗೆ ನಾಳೆ ರಜೆ ಘೋಷಣೆ!

October 21, 2026

Recent News

Vijaya Sakshi News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

ಶಿವಮೊಗ್ಗ ದಸರಾ ಆನೆ ಬೆದರಿದ ಘಟನೆ ಬೆನ್ನಲ್ಲೇ ಎಚ್ಚೆತ್ತ ಅರಣ್ಯ ಇಲಾಖೆ: ಮುಂದಿನ ವರ್ಷದಿಂದ ಕಡ್ಡಾಯ ತಾಲೀಮು!

ಶಿವಮೊಗ್ಗ ದಸರಾ ಆನೆ ಬೆದರಿದ ಘಟನೆ ಬೆನ್ನಲ್ಲೇ ಎಚ್ಚೆತ್ತ ಅರಣ್ಯ ಇಲಾಖೆ: ಮುಂದಿನ ವರ್ಷದಿಂದ ಕಡ್ಡಾಯ ತಾಲೀಮು!

October 21, 2026
ದುರ್ಗಾ ಮೂರ್ತಿ ವಿಸರ್ಜನೆ ವೇಳೆ ಭೀಕರ ದುರಂತ: ವಿದ್ಯುತ್ ತಂತಿ ತಗುಲಿ ಮೂವರು ಸಾವು

ದುರ್ಗಾ ಮೂರ್ತಿ ವಿಸರ್ಜನೆ ವೇಳೆ ಭೀಕರ ದುರಂತ: ವಿದ್ಯುತ್ ತಂತಿ ತಗುಲಿ ಮೂವರು ಸಾವು

October 21, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

  • E Paper
  • WhatsApp Group
  • E Paper
  • E Paper
error: Content is protected !!
Join WhatsApp Read E-Paper