ಬೆಂಗಳೂರು: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಬಿಜಿ ರಾಮ್‌ಜಿ ಕಾಯ್ದೆ ವಿರುದ್ಧ ಕಾಂಗ್ರೆಸ್ ಪಕ್ಷ ನ್ಯಾಯಾಲಯದ ಮೆಟ್ಟಿಲೇರಿ ಕಾನೂನು ಹೋರಾಟ ನಡೆಸುವುದರ ಜೊತೆಗೆ ಬೀದಿಗಿಳಿದು ಜನಾಂದೋಲನ ರೂಪಿಸಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
ಹೋಟೆಲ್ ಲಲಿತ್ ಅಶೋಕದಲ್ಲಿ ಗುರುವಾರ ಆಯೋಜಿಸಿದ್ದ ಪಕ್ಷದ ಸಚಿವರು, ಸಂಸದರು, ಶಾಸಕರು ಹಾಗೂ ಮುಖಂಡರ ಸಭೆಗೂ ಮುನ್ನ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. ಈ ಕಾಯ್ದೆಯು ಪಂಚಾಯಿತಿಗಳ ಅಧಿಕಾರ ಕಡಿತಗೊಳಿಸಿ ದೆಹಲಿಯಿಂದ ತೀರ್ಮಾನಗಳನ್ನು ಹೇರುವ ಪ್ರಯತ್ನವಾಗಿದೆ. ಶೇಕಡಾ 40% ಅನುದಾನ ಭರಿಸುವುದು ರಾಜ್ಯಗಳಿಗೆ ಅಸಾಧ್ಯ ಎಂದು ಅವರು ಹೇಳಿದರು.
ರಾಜ್ಯಗಳ ಅಭಿಪ್ರಾಯ ಪಡೆಯದೇ ತೀರ್ಮಾನಿಸಿರುವುದನ್ನು ಖಂಡಿಸಿ ಪ್ರತಿ ಪಂಚಾಯಿತಿ, ತಾಲ್ಲೂಕು ಹಾಗೂ ಜಿಲ್ಲಾ ಕೇಂದ್ರಗಳಲ್ಲಿ ಸಭೆ ನಡೆಸಿ ಜನರಲ್ಲಿ ಅರಿವು ಮೂಡಿಸಲಾಗುವುದು ಎಂದರು.



