ಬೆಂಗಳೂರು:- ರಾಜಧಾನಿ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಶನಿವಾರ ಹಾಗೂ ಭಾನುವಾರ ಪವರ್ ಕಟ್ ಇರಲಿದೆ ಎಂದು ಬೆಸ್ಕಾಂ ತಿಳಿಸಿದೆ.
ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ವಿದ್ಯುತ್ ಕಂಬಗಳ ಬದಲಾವಣೆ, ಇತರ ಕೆಲಸ ಕಾರಣದಿಂದ ಶನಿವಾರ ಮತ್ತು ಭಾನುವಾರ ಬೆಂಗಳೂರಿನ ಹಲವಾರು ಪ್ರದೇಶಗಳಲ್ಲಿ ಪವರ್ ಕಟ್ ಇರಲಿದೆ. ದಕ್ಷಿಣ ಬೆಂಗಳೂರು ಪ್ರದೇಶಗಳಾದ ಬೊಮ್ಮನಹಳ್ಳಿ, ಹೆಚ್ಎಸ್ಆರ್ ಲೇಔಟ್, ಕೂಡ್ಲು, ಜಕ್ಕಸಂದ್ರ, ಬೆಳ್ಳಂದೂರು ಮತ್ತು ಸರ್ಜಾಪುರ ರಸ್ತೆಯಲ್ಲಿ ವಿದ್ಯುತ್ ಕಡಿತವಾಗಲಿದೆ. ಪೂರ್ವ ಬೆಂಗಳೂರಿನ ಮಾರತಹಳ್ಳಿ, ವೈಟ್ಫೀಲ್ಡ್, ಕೆಆರ್ ಪುರಂ, ಮಹದೇವಪುರ, ಬಾಣಸವಾಡಿ, ಮತ್ತು ಹೊರಮಾವು ವಿದ್ಯುತ್ ಕಡಿತವಾಗಲಿದೆ. ಬೆಂಗಳೂರಿನ ವಿದ್ಯುತ್ ಕಡಿತದ ಪರಿಣಾಮವನ್ನು ಕಡಿಮೆ ಮಾಡಲು, ನಿವಾಸಿಗಳು ಮತ್ತು ವ್ಯಾಪಾರಿಗಳು ಹಲವಾರು ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವಂತೆ ಸೂಚಿಸಲಾಗಿದೆ.
ವಿದ್ಯುತ್ ಕಡಿತಗೊಳ್ಳುವ ಮೊದಲು ಮೊಬೈಲ್ ಫೋನ್ಗಳು, ಲ್ಯಾಪ್ಟಾಪ್ಗಳು ಮತ್ತು ಪವರ್ ಬ್ಯಾಂಕ್ಗಳು ಸಂಪೂರ್ಣವಾಗಿ ಚಾರ್ಜ್ ಆಗಿವೆಯೇ ಎಂದು ನೋಡಿಕೊಳ್ಳಬೇಕು. ಮನೆಯಿಂದ ಕೆಲಸ ಮಾಡುವವರು, ಕೆಲಸದ ಸ್ಥಳದಲ್ಲಿ ವೈ-ಫೈ ಹೊಂದಿರುವ ಬಗ್ಗೆ ಮೊದಲೆ ಪರಿಶೀಲನೆ ಮಾಡಿಕೊಳ್ಳುವ ಅಗತ್ಯ ಇದೆ ಎಂದು ಹೇಳಲಾಗಿದೆ.



