ಬೆಂಗಳೂರು: ತುರ್ತು ನಿರ್ವಹಣಾ ಮತ್ತು ತಾಂತ್ರಿಕ ಕಾಮಗಾರಿಗಳ ಹಿನ್ನೆಲೆಯಲ್ಲಿ ಭಾನುವಾರ ರಾಜಧಾನಿ ಬೆಂಗಳೂರಿನ ಹಲವಾರು ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.
ಪ್ಲಾಟಿನಮ್ ಸಿಟಿ, ಜಲಸೌಧ ಸುತ್ತಮುತ್ತಲಿನ ಪ್ರದೇಶಗಳು, ಎಚ್‌ಎಂಟಿ ರಸ್ತೆ, ಪೀಣ್ಯ ಕೈಗಾರಿಕಾ ಪ್ರದೇಶ, ರಾಜೇಶ್ವರಿನಗರ, ಗಣಪತಿನಗರ, ಭೈರವೇಶ್ವರ ನಗರ, ರಾಜಗೋಪಾಲ ನಗರ ಸೇರಿದಂತೆ ಹಲವು ಭಾಗಗಳಲ್ಲಿ ಪವರ್ ಕಟ್ ಇರಲಿದೆ. ಜೊತೆಗೆ ಜಾಲಹಳ್ಳಿ ವಿಭಾಗದ ಅಬ್ಬಿಗೆರೆ ಉಪಕೇಂದ್ರ ವ್ಯಾಪ್ತಿಯ ಕಮ್ಮಗೊಂಡನಹಳ್ಳಿ, ವಡೇರಹಳ್ಳಿ, ವಿಶ್ವೇಶ್ವರಯ್ಯ ಬಡಾವಣೆ, ಕುವೆಂಪು ನಗರ, ಸಿಂಗಾಪುರ ಹಾಗೂ ಸುತ್ತಮುತ್ತಲಿನ ನಿವಾಸಿ ಮತ್ತು ಕೈಗಾರಿಕಾ ಪ್ರದೇಶಗಳಲ್ಲೂ ವಿದ್ಯುತ್ ಪೂರೈಕೆಯಲ್ಲಿ ಅಡಚಣೆ ಉಂಟಾಗಲಿದೆ.
ಕಾಮಗಾರಿ ಪೂರ್ಣಗೊಂಡ ತಕ್ಷಣ ವಿದ್ಯುತ್ ಪೂರೈಕೆಯನ್ನು ಮರುಸ್ಥಾಪಿಸಲಾಗುವುದು ಎಂದು ಬೆಸ್ಕಾಂ ತಿಳಿಸಿದ್ದು, ಸಾರ್ವಜನಿಕರು ಸಹಕರಿಸುವಂತೆ ಮನವಿ ಮಾಡಿದೆ.



