ಬೆಂಗಳೂರು:- ರಾಜಧಾನಿ ಬೆಂಗಳೂರು ನಗರದ ವಿವಿಧೆಡೆ ಫೆಬ್ರವರಿ 5 ಮತ್ತು 6ರಂದು ಕಾವೇರಿ ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಜಲಮಂಡಳಿ ಕೋರಿದೆ.
ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ತುರ್ತು ನಿರ್ವಹಣಾ ಕಾಮಗಾರಿ ನಡೆಸಲಿರುವ ಹಿನ್ನೆಲೆ, ಫೆಬ್ರವರಿ 5 ಮತ್ತು 6 ರಂದು ನಗರದ ವಿವಿಧ ಭಾಗಗಳಲ್ಲಿ ಕಾವೇರಿ ನೀರು ಪೂರೈಕೆ ವ್ಯತ್ಯಯವಾಗಲಿದೆ.
BWSSB ಅಧ್ಯಕ್ಷ ಡಾ.ವಿ. ರಾಮ್ ಪ್ರಸಾದ್ ಮನೋಹರ್ ತಿಳಿಸಿದಂತೆ, 1200ಎಂಎಂ, 900ಎಂಎಂ ಮತ್ತು 700ಎಂಎಂ ವ್ಯಾಸದ ನೀರು ಸರಬರಾಜು ಪೈಪ್‌ಲೈನ್ ಅಳವಡಿಕೆ ಕಾಮಗಾರಿ ನಡೆಯಲಿದೆ. ಈ ಕಾರಣಕ್ಕೆ, ಫೆಬ್ರವರಿ 5 ಶುಕ್ರವಾರ ಬೆಳಗ್ಗೆ 6 ರಿಂದ ಫೆಬ್ರವರಿ 6 ಬೆಳಗ್ಗೆ 6 ಗಂಟೆಯವರೆಗೆ (ಒಟ್ಟು 24 ಗಂಟೆ) ಮೊದಲನೆಯ ಮತ್ತು ಎರಡನೆಯ ಹಂತದ ಜಲರೇಚಕ ಯಂತ್ರಗಾರ ಸ್ಥಗಿತಗೊಳಿಸಲಾಗುತ್ತದೆ. ಮಂಡಳಿ ಸೂಚನೆಯಂತೆ, ನಾಗರಿಕರು ಮುಂಜಾಗ್ರತೆಯಾಗಿ ನೀರನ್ನು ಸಂಗ್ರಹಿಸಿಕೊಳ್ಳಬೇಕು ಎಂದು ಕೋರಿದೆ.
ಯಾವ್ಯಾವ ಏರಿಯಾದಲ್ಲಿ ನೀರು ಪೂರೈಕೆಯಲ್ಲಿ ವ್ಯತ್ಯಯ?
ಮಾಗಡಿ ರಸ್ತೆ, ಕದ್ರೆನಹಳ್ಳಿ, ಗಂಗಾಧರ ನಗರ, ಪ್ರಗತಿಪುರ, ಪದ್ಮನಾಭ ನಗರ, ಆರ್.ಕೆ ಲೇಔಟ್, ಚಿಕ್ಕಲ್ಲಸಂದ್ರ, ಹನುಮಗಿರಿ ನಗರ, ಮುನೇಶ್ವರ ನಗರ, ಬೇಂದ್ರೆನಗರ, ಕುಮಾರಸ್ವಾಮಿ ಬಡಾವಣೆ (1 & 2ನೇ ಹಂತ), ಚಂದ್ರನಗರ, ಮಾರುತಿ ಬಡಾವಣೆ, ವಿಠ್ಠಲ್ ನಗರ, ಇಸ್ರೋ ಬಡಾವಣೆ, ಟೀಚರ್ಸ್ ಕಾಲೋನಿ, ಯಲಚೇನಹಳ್ಳಿ, ಕನಕಪುರ ಮುಖ್ಯರಸ್ತೆ, ಇಲಿಯಾಸ್ ನಗರ, ಪೂರ್ಣ ಪ್ರಜ್ಞಾ ಬಡಾವಣೆ, ಮಿನಜ್ ನಗರ, ಉತ್ತರಹಳ್ಳಿ,
ಕೆ.ಎಸ್.ಆರ್.ಟಿ.ಸಿ ಬಡಾವಣೆ, ಅಂಕಪ್ಪ ಬಡಾವಣೆ, ಗುಮ್ಮಯ್ಯ ಬಡಾವಣೆ, ಬನಶಂಕರಿ 5ನೇ ಹಂತ, ಅಶೋಕ್ ನಗರ ಪೈಪ್‌ಲೈನ್ ರಸ್ತೆ, ಜಯನಗರ, ತಿಲಕ್ ನಗರ, ಮಾಧವನ ಪಾರ್ಕ್, ಹೊಂಬೇಗೌಡ ನಗರ, ಲಕ್ಕಸಂದ್ರ, ಶಾಂತಿನಗರ ಲೇಔಟ್, ಜೆಕೆಪುರ, ಅಕ್ಕಿತಿಮ್ಮನಹಳ್ಳಿ, ಜಗಜೀವನ ರಾಮನಗರ, ವಾಲ್ಮೀಕಿ ನಗರ, ಮಾವಳ್ಳಿ, ಶಂಕರಪುರಂ, ಕೆಂಪೇಗೌಡನಗರ, ಬನಗಿರಿ, ಯಡಿಯೂರು, ಇಟ್ಟಮಡು, ಎಸ್‌ಬಿಎಂ ಕಾಲೋನಿ, ಹೊಸಕೆರೆಹಳ್ಳಿ, ಐಟಿಐ ಲೇಔಟ್, ಶ್ರೀನಿವಾಸ ನಗರ, ಡಿಸೋಜಾ ನಗರ, ಕೆರೆಕೋಡಿ, ಮುನೇಶ್ವರ ನಗರ, ಜೆಪಿನಗರ (1,2,3ನೇ ಹಂತ), ಮಾರೇನಹಳ್ಳಿ, ಭೈರಸಂದ್ರ, ಎಲ್‌ಐಸಿ ಕಾಲೋನಿ, ಸಿದ್ದಾಪುರ, ವಿಲ್ಸ್‌ನ್ ಗಾರ್ಡನ್, ನಿಮಾನ್ಸ್ ಆಸ್ಪತ್ರೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಜಲಮಂಡಳಿ ತಿಳಿಸಿದೆ.



