ಬೆಂಗಳೂರು:- ರಾಜಧಾನಿ ಬೆಂಗಳೂರಿನ ಹಲವೆಡೆ ಇಂದಿನಿಂದ ಮೂರು ದಿನಗಳ ಕಾಲ ಪವರ್ ಕಟ್ ಇರಲಿದೆ ಎಂದು ಬೆಸ್ಕಾಂ ತಿಳಿಸಿದೆ.
ಬೆಸ್ಕಾಂ ಹಾಗೂ ಕೆಪಿಟಿಸಿಎಲ್ ವತಿಯಿಂದ ಕೈಗೊಳ್ಳಲಾಗುತ್ತಿರುವ ನಿರ್ವಹಣಾ ಕಾಮಗಾರಿಗಳ ಹಿನ್ನೆಲೆಯಲ್ಲಿ ಭಾನುವಾರ, ಸೋಮವಾರ ಮತ್ತು ಮಂಗಳವಾರ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ನಿಗದಿತ ಅವಧಿಗೆ ವಿದ್ಯುತ್ ಸರಬರಾಜು ಸ್ಥಗಿತಗೊಳ್ಳಲಿದೆ.
ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸಿ, ವಿದ್ಯುತ್ ಅವಲಂಬಿತ ಕೆಲಸಗಳನ್ನು ಮುಂಚಿತವಾಗಿ ಪೂರ್ಣಗೊಳಿಸಿಕೊಳ್ಳುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.
ಭಾನುವಾರ ವಿದ್ಯುತ್ ವ್ಯತ್ಯಯ:
ಸೂರ್ಯ ಸಿಟಿ ಫೇಸ್-1, ಮರಸೂರು, ನಾಗನಾಯಕನಹಳ್ಳಿ, ಇಗ್ಗಲೂರು, ಸರ್ಜಾಪುರ, ಇಟ್ಟಗನೂರು, ಕಾಡ ಅಗ್ರಹಾರ, ಸೋಂಪುರ ಗೇಟ್, ಬಿ. ಹೊಸಹಳ್ಳಿ, ದಾಸನಪುರ, ಕಂಬ್ಳಿಪುರ, ಹರೋಹಳ್ಳಿ, ಬೊಮ್ಮಸಂದ್ರ, ಬೊಮ್ಮಸಂದ್ರ ಕೈಗಾರಿಕಾ ಪ್ರದೇಶ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳಿಗ್ಗೆ 9ರಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
ಸೋಮವಾರ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ:
ಎಲ್ & ಟಿ ಅಪಾರ್ಟ್‌ಮೆಂಟ್, ಯಶೋದನಗರ, ಜಕ್ಕೂರು ಪ್ಲಾಂಟೇಶನ್, ಸೆಂಚುರಿ ಅಪಾರ್ಟ್‌ಮೆಂಟ್, ಬ್ಯಾಟರಾಯನಪುರ, ಸ್ಪಾರ್ಕಲ್ ಒನ್ ಮಾಲ್, ಅಮೃತಹಳ್ಳಿ, ಸಹಕಾರನಗರ ಜಿ ಬ್ಲಾಕ್, ಶಬರಿನಗರ, ಕೆನರಾ ಬ್ಯಾಂಕ್ ಲೇಔಟ್, ಧನಲಕ್ಷ್ಮಿ ಲೇಔಟ್, ತಿಂಡ್ಲು ಮುಖ್ಯರಸ್ತೆ, ಸರ್ ಎಂ.ವಿ. ಲೇಔಟ್, ಫಾರ್ಚೂನಾ ಸೆಂಟರ್ ಪಾರ್ಕ್, ತಿಂಡ್ಲು ಗ್ರಾಮ, ಸಪ್ತಗಿರಿ ಲೇಔಟ್, ಗುರುದರ್ಶನ ಲೇಔಟ್, ವೆಂಕಟಸ್ವಾಮಪ್ಪ ಲೇಔಟ್, ನಂಜಪ್ಪ ಸರ್ಕಲ್, ಎಲ್ & ಜಿ ಎನ್‌ಕ್ಲೇವ್ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳಿಗ್ಗೆ 11ರಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
ಇದಲ್ಲದೆ, ರವೀಂದ್ರನಗರ, ಪ್ರಸನ್ನತ್ ನಗರ, ಸಂತೋಷ್ ನಗರ, ಏರ್‌ಫೋರ್ಸ್ ಜಾಲಹಳ್ಳಿ ವೆಸ್ಟ್, ವೈಷ್ಣವಿ ನಕ್ಷತ್ರ ಅಪಾರ್ಟ್‌ಮೆಂಟ್, ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ, ತ್ರಿವೇಣಿ, ಎಚ್‌ಎಚ್‌ವಿ, ಡಿಎಂಜಿ, ಕೃಷ್ಣ ಫ್ಯಾಬ್ರಿಕೇಷನ್ಸ್, ಜೆಮಿನಿ ಇಂಡಸ್ಟ್ರೀಸ್, ರವಿ-ಕಿರ್ಲೋಸ್ಕರ್ ಆಸ್ಪತ್ರೆ, ಎಂಎಸ್‌ಐಎಲ್ ಪ್ರಿಂಟಿಂಗ್ ಪ್ರೆಸ್, ವಿಪ್ರೋ ವೆಲ್‌ಕಾಸ್ಟ್ ಫ್ಯಾಕ್ಟರಿ, ಐಟಿಸಿ, ವೋಲ್ವೋ, ಹಿಟಾಚಿ ಇಂಡಸ್ಟ್ರೀಸ್, ಗೀತಾ ಟಿಂಬರ್ಸ್ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲೂ ವಿದ್ಯುತ್ ಸರಬರಾಜು ಸ್ಥಗಿತವಾಗಲಿದೆ.
ಮಂಗಳವಾರ ವಿದ್ಯುತ್ ವ್ಯತ್ಯಯ:
ಗಂಗಾನಗರ, ವೀವರ್ಸ್ ಕಾಲೋನಿ, ಸಿಬಿಐ ಕ್ವಾರ್ಟರ್ಸ್, ಆರ್‌ಬಿಐ ಕಾಲೋನಿ, ಸಿಪಿಯು ಬ್ಲಾಕ್, ಡಿಜಿಕ್ಯೂ ಕ್ವಾರ್ಟರ್ಸ್, ಯುಎಎಸ್ ಕ್ಯಾಂಪಸ್, ದಿನ್ನೂರು ಮುಖ್ಯರಸ್ತೆ, ಆರ್.ಟಿ.ನಗರ, ಎಚ್‌ಎಂಟಿ ಬ್ಲಾಕ್, ಚಾಮುಂಡಿನಗರ, ಆರ್ಮಿ ವೆಟರನ್ಸ್ ಕಾಲೋನಿ, ಆರ್.ಟಿ.ನಗರ ಪೊಲೀಸ್ ಠಾಣೆ, ಡಾಲರ್ಸ್ ಕಾಲೋನಿ, ಎಂಎಲ್‌ಎ ಲೇಔಟ್, ರತನ್ ಅಪಾರ್ಟ್‌ಮೆಂಟ್, ಗಾಯತ್ರಿ ಅಪಾರ್ಟ್‌ಮೆಂಟ್, ನೃಪತುಂಗ ಎಕ್ಸ್‌ಟೆನ್ಷನ್, ಕೃಷ್ಣಪ್ಪ ಬ್ಲಾಕ್, ಸಿಬಿಐ ಮುಖ್ಯರಸ್ತೆ, ವೇಣುಗೋಪಾಲ ಲೇಔಟ್, ಜಡ್ಜಸ್ ಕಾಲೋನಿ, ಕರಿಯಣ್ಣ ಲೇಔಟ್, ಯೋಗೇಶ್ವರ ನಗರ, ರಿಂಗ್ ರಸ್ತೆ, ಕುವೆಂಪುನಗರ, ನೇತಾಜಿ ನಗರ, ಸ್ಟರ್ಲಿಂಗ್ ಗಾರ್ಡನ್ ಲೇಔಟ್, ಅಲ್ಪೈನ್ ಅಪಾರ್ಟ್‌ಮೆಂಟ್, ಜೈನ್ ಅಪಾರ್ಟ್‌ಮೆಂಟ್, ಗಿದ್ದಪ್ಪ ಬ್ಲಾಕ್, ಎಜಿಎಸ್ ಕಾಲೋನಿ, ಎಸ್‌ಬಿಎಂ ಕಾಲೋನಿ, ಸಂಜಯನಗರ, ಎಇಸಿಎಸ್ ಲೇಔಟ್, ಗೆದ್ದಲಹಳ್ಳಿ, ಭೂಪಸಂದ್ರ, ಸೆಂಟ್ರಲ್ ಎಕ್ಸೈಸ್ ಲೇಔಟ್, ಕಲ್ಪನಾ ಚಾವ್ಲಾ ರಸ್ತೆ, ಮೊಹಮ್ಮದ್ ಲೇಔಟ್, ವಿಎಸ್‌ಎನ್‌ಎಲ್ ವೈಟ್ ಹೌಸ್, ಅಮರಜ್ಯೋತಿ ಲೇಔಟ್, ಸನ್‌ರೈಸ್ ಕಾಲೋನಿ, ಮೈತ್ರಿ ಬಜಾರ್, ತಿಮ್ಮಕ್ಕ ಲೇಔಟ್, ಅಕ್ಕಯ್ಯಮ್ಮ ಲೇಔಟ್, ಗುಡ್ಡದಹಳ್ಳಿ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳಿಗ್ಗೆ 11ರಿಂದ ಮಧ್ಯಾಹ್ನ 3 ಗಂಟೆಯವರೆಗೆ ವಿದ್ಯುತ್ ಸರಬರಾಜು ಸ್ಥಗಿತಗೊಳ್ಳಲಿದೆ.
ವಿದ್ಯುತ್ ವ್ಯತ್ಯಯದ ಅವಧಿಯಲ್ಲಿ ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಬೆಸ್ಕಾಂ ಅಧಿಕಾರಿಗಳು ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ.



