HomeKarnataka Newsಅನ್ನದಾತರ ಗಮನಕ್ಕೆ; ಕರ್ನಾಟಕದ 22,000ಕ್ಕೂ ಹೆಚ್ಚು ರೈತರಿಗೆ ಪಿಎಂ-ಕಿಸಾನ್ ಹಣ ಬಿಡುಗಡೆ!

ಅನ್ನದಾತರ ಗಮನಕ್ಕೆ; ಕರ್ನಾಟಕದ 22,000ಕ್ಕೂ ಹೆಚ್ಚು ರೈತರಿಗೆ ಪಿಎಂ-ಕಿಸಾನ್ ಹಣ ಬಿಡುಗಡೆ!

For Dai;y Updates Join Our whatsapp Group

Spread the love

ಬೆಂಗಳೂರು: ಕರ್ನಾಟಕದ ರೈತರಿಗೆ ಪಿಎಂ-ಕಿಸಾನ್ ಯೋಜನೆಯ ಬಾಕಿ ಹಣ ಬಿಡುಗಡೆಗಾಗಿ ಕೇಂದ್ರ ಸರ್ಕಾರ ಸಕಾರಾತ್ಮಕ ಕ್ರಮ ಕೈಗೊಂಡಿದೆ.

ರಾಜ್ಯ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ 2025ರ ಡಿಸೆಂಬರ್ 17 ರಂದು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಪತ್ರ ಬರೆದು, ತಾಂತ್ರಿಕ ಕಾರಣಗಳಿಂದ ಸುಮಾರು 30,000 ರೈತರು ಯೋಜನೆಯ ಲಾಭದಿಂದ ವಂಚಿತರಾಗಿರುವುದನ್ನು ಗಮನಕ್ಕೆ ತಂದಿದ್ದರು. ಕಳೆದ ವಾರ ನಡೆದ ಅಂತಾರಾಷ್ಟ್ರೀಯ ವಾಣಿಜ್ಯ ಮೇಳದಲ್ಲಿ ಸಹ ಅವರು ಈ ವಿಷಯವನ್ನು ಉಲ್ಲೇಖಿಸಿ ಮನವಿ ಮಾಡಿದ್ದರು.

ಕೇಂದ್ರ ಸಚಿವ ಚೌಹಾಣ್, ರಾಜ್ಯ ಸರ್ಕಾರ ನೀಡಿದ ದೃಢೀಕರಣದ ಆಧಾರದ ಮೇಲೆ ಈಗಾಗಲೇ 22,000ಕ್ಕೂ ಹೆಚ್ಚು ಫಲಾನುಭವಿಗಳನ್ನು 22ನೇ ಕಂತಿನ ಪಾವತಿ ಪಟ್ಟಿಯಲ್ಲಿ ಸೇರಿಸಿದ್ದಾಗಿ ತಿಳಿಸಿದ್ದಾರೆ ಮತ್ತು ಶೀಘ್ರದಲ್ಲೇ ಅವರಿಗೆ ಹಣ ಬಿಡುಗಡೆ ಆಗಲಿದೆ ಎಂದು ಖಚಿತಪಡಿಸಿದ್ದಾರೆ. ಉಳಿದ ಪ್ರಕರಣಗಳನ್ನು ರಾಜ್ಯ ಅಧಿಕಾರಿಗಳು ಪರಿಶೀಲಿಸಿ ದೃಢೀಕರಿಸಿದ ತಕ್ಷಣ ಉಳಿದ ರೈತರನ್ನೂ ಯೋಜನೆಯಲ್ಲಿಗೆ ಸೇರಿಸಲಾಗುವುದು ಎಂದು ಭರವಸೆ ನೀಡಿದ್ದಾರೆ.

ಈ ಬೆಳವಣಿಗೆಯ ಕುರಿತು ಪ್ರತಿಕ್ರಿಯಿಸಿದ ಎನ್. ಚಲುವರಾಯಸ್ವಾಮಿ, ರೈತರಿಗೆ ನ್ಯಾಯ ಒದಗಿಸಿದ ಕೇಂದ್ರ ಕೃಷಿ ಸಚಿವರಿಗೆ ರಾಜ್ಯ ಸರ್ಕಾರದ ಪರವಾಗಿ ಹೃತ್ಪೂರ್ವಕ ಧನ್ಯವಾದಗಳನ್ನು ಸಲ್ಲಿಸಿದ್ದಾರೆ. ಕೇಂದ್ರದ ಈ ಕ್ರಮದಿಂದ ಅರ್ಹ ರೈತರಿಗೆ ಸಮಯಕ್ಕೆ ಸರಿಯಾಗಿ ಆರ್ಥಿಕ ನೆರವು ಸಿಗಲಿದೆ, ಮತ್ತು ಉಳಿದ ದಾಖಲೆಗಳ ಪರಿಶೀಲನೆ ಶೀಘ್ರವಾಗಿ ಪೂರ್ಣಗೊಳಿಸಲು ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!