ಚಿನ್ನದ ಬೆಲೆ ಕಳೆದ ಕೆಲವು ದಿನಗಳಿಂದ ಅಸ್ಥಿರ ಸ್ಥಿತಿಯಲ್ಲಿ ಮುಂದುವರಿದಿದ್ದು, ಅತ್ತಿಂದಿತ್ತ ಏರಿಳಿತ ಕಾಣುತ್ತಿದೆ.
ಕಳೆದ ಎರಡು ವಾರಗಳಿಂದ ಚಿನ್ನದ ದರದಲ್ಲಿ ನಿರಂತರವಾಗಿ ಏರಿಳಿತವಾಗುತ್ತಿದ್ದು, ಕಳೆದ 10 ದಿನಗಳಲ್ಲಿ ಪ್ರತಿ ಗ್ರಾಂಗೆ ಸುಮಾರು ₹355 ರಷ್ಟು ಹೆಚ್ಚಳವಾಗಿದೆ ಎಂದು ವರದಿಯಾಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲೂ ಇದೇ ರೀತಿಯ ಅಲ್ಪ ಏರಿಳಿತಗಳು ಮುಂದುವರಿದಿವೆ.
ಇದೇ ವೇಳೆ ಬೆಳ್ಳಿ ಬೆಲೆಯಲ್ಲಿಯೂ ಸಣ್ಣ ಪ್ರಮಾಣದ ಏರಿಕೆ ಕಂಡುಬಂದಿದ್ದು, ಕಳೆದ 10 ದಿನಗಳಲ್ಲಿ ಸುಮಾರು ₹10 ರಷ್ಟು ಹೆಚ್ಚಳವಾಗಿದೆ. ಮಾರುಕಟ್ಟೆ ತಜ್ಞರ ಪ್ರಕಾರ, ಜಾಗತಿಕ ಆರ್ಥಿಕ ಪರಿಸ್ಥಿತಿ ಮತ್ತು ಹೂಡಿಕೆದಾರರ ಅಸ್ಥಿರ ಮನೋಭಾವದಿಂದ ಚಿನ್ನ–ಬೆಳ್ಳಿ ದರಗಳಲ್ಲಿ ಈ ರೀತಿಯ ಏರಿಳಿತಗಳು ಕಂಡುಬರುತ್ತಿವೆ.
ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 1,40,100 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 1,52,840 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 26,000 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 1,40,100 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 26,000 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 26,500 ರೂ ಇದೆ.
ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಏಪ್ರಿಲ್ 12ಕ್ಕೆ):
- 24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 15,284 ರೂ
- 22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 14,010 ರೂ
- 18 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 11,463 ರೂ
- ಬೆಳ್ಳಿ ಬೆಲೆ 1 ಗ್ರಾಂಗೆ: 260 ರೂ.
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
- 24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 15,284 ರೂ
- 22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 14,010 ರೂ
- ಬೆಳ್ಳಿ ಬೆಲೆ 1 ಗ್ರಾಂಗೆ: 260 ರೂ.



