ಚಿನ್ನದ ಬೆಲೆ ಇಂದು ಸ್ವಲ್ಪ ಇಳಿಕೆ ಕಂಡಿದ್ದು, ಗೋಲ್ಡ್ ಪ್ರಿಯರು ಕೊಂಚ ನಿರಾಳರಾಗಿದ್ದಾರೆ. ನಿನ್ನೆ ಒಂದೇ ದಿನ ಎರಡು ಬಾರಿ ಹೆಚ್ಚಳಗೊಂಡಿದ್ದ ಚಿನ್ನದ ಬೆಲೆ ಇವತ್ತು ಗ್ರಾಮ್ಗೆ 70 ರೂ ಕಡಿಮೆ ಆಗಿದೆ.
ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 1,17,200 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 1,27,850 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 17,300 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 1,17,200 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 17,300 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 18,300 ರೂ ಇದೆ.
ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ನವೆಂಬರ್ 14ಕ್ಕೆ):-
24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 12,785 ರೂ.
22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 11,720 ರೂ.
18 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 9,589 ರೂ.
ಬೆಳ್ಳಿ ಬೆಲೆ 1 ಗ್ರಾಂಗೆ: 173 ರೂ.
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ:-
24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 12,785 ರೂ.
22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 11,720 ರೂ.
ಬೆಳ್ಳಿ ಬೆಲೆ 1 ಗ್ರಾಂಗೆ: 173 ರೂ.


