ಮೆಟ್ರೋ ಪ್ರಯಾಣಿಕರ ಗಮನಕ್ಕೆ: ಈ ದಿನಗಳಂದು ರೈಲು ಸೇವೆ ಸಂಪೂರ್ಣ ಸ್ಥಗಿತ!

0
Spread the love

ಬೆಂಗಳೂರು:- ಮೆಟ್ರೋ ಪ್ರಯಾಣಿಕರು ನೋಡಲೇಬೇಕಾದ ಸ್ಟೋರಿ. ನಾಗಸಂದ್ರ-ಮಾದವರ ನಡುವೆ ಸಿಗ್ನಲಿಂಗ್ ಕಾರ್ಯ ಇರುವ ಹಿನ್ನೆಲೆ, ಹಸಿರು ಮಾರ್ಗದ ನಾಗಸಂದ್ರ ಮತ್ತು ರೇಷ್ಮೆ ಸಂಸ್ತೆ ನಡೆವೆ ಮೆಟ್ರೋ ರೈಲು ಸೇವೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ತಿಳಿಸಿದೆ.

Advertisement

ಆಗಸ್ಟ್​ 20, 23, 30 ಮತ್ತು ಸೆಪ್ಟೆಂಬರ್​​ 6, 11 ರಂದು ಪೂರ್ಣ ದಿನ ರೈಲು ಸೇವೆಗಳನ್ನು ಸ್ಥಗಿತಗೊಳಿಸಲಾಗುತ್ತಿದೆ.

ಆ.20, ಆ.23 ಮತ್ತು ಆ.30 ಹಾಗೂ ಸೆ.6 ಮತ್ತು ಸೆ.11ರಂದು ಪೀಣ್ಯ ಕೈಗಾರಿಕಾ ಪ್ರದೇಶ ಮತ್ತು ನಾಗಸಂದ್ರ ಮೆಟ್ರೋ ನಿಲ್ದಾಣಗಳ ನಡುವೆ ರೈಲು ಸೇವೆಗಳನ್ನು ಪೂರ್ಣ ದಿನ ಸ್ಥಗಿತಗೊಳಿಸಲಾಗುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ನಾಗಸಂದ್ರ ಮೆಟ್ರೋ ನಿಲ್ದಾಣದಿಂದ ಪೀಣ್ಯ ಇಂಡಸ್ಟ್ರಿ ಕಡೆಗೆ:
ನಾಗಸಂದ್ರ ಮೆಟ್ರೋ ನಿಲ್ದಾಣದಿಂದ ಪೀಣ್ಯ ಇಂಡಸ್ಟ್ರಿ ಕಡೆಗೆ ಆ.24ರಂದು ಕೊನೆಯ ರೈಲು ಸೇವೆಯು ರಾತ್ರಿ 11:05ರ ಬದಲಾಗಿ 10:00 ಗಂಟೆಗೆ ಪ್ರಾರಂಭವಾಗಲಿದೆ. ಆ.25ರಂದು ಮೊದಲ ರೈಲು ಸೇವೆಯು ಬೆಳಗ್ಗೆ 5:00 ಗಂಟೆಯ ಬದಲಾಗಿ 06:00 ಗಂಟೆಗೆ ಪ್ರಾರಂಭವಾಗಲಿದೆ.

ಆ.24ರಂದು ಕೊನೆಯ ರೈಲು ರಾತ್ರಿ 11:12ಕ್ಕೆ ಸಂಚರಿಸಲಿದೆ. ಆ.25 ರಂದು ಮೊದಲ ರೈಲು ಸೇವೆಯು ಬೆಳಗ್ಗೆ 05:00ಕ್ಕೆ ಪ್ರಾರಂಭವಾಗಲಿದೆ. ನೇರಳೆ ಮಾರ್ಗದ ಮೆಟ್ರೋ ಸೇವೆಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ನಮ್ಮ ಮೆಟ್ರೋ ತಿಳಿಸಿದೆ.


Spread the love

LEAVE A REPLY

Please enter your comment!
Please enter your name here