ಬೆಂಗಳೂರು:- ನಮ್ಮ ಮೆಟ್ರೋ ಯೆಲ್ಲೋ ಲೈನ್ನಲ್ಲಿ ಇಂದು ಸಂಚಾರ ವ್ಯತ್ಯಯ ಉಂಟಾಗಿದ್ದು, ಪ್ರಯಾಣಿಕರು ಸಹಕರಿಸುವಂತೆ BMRCL ಮನವಿ ಮಾಡಿದೆ.
ಇಂದು ಬೆಳಿಗ್ಗೆ ಜನರು ಕಚೇರಿ, ಕೆಲಸ ಕಾರ್ಯಗಳಿಗೆ ತೆರಳುವ ಸಮಯದಲ್ಲೇ ಈ ಅನಾನುಕೂಲತೆ ಉಂಟಾಗಿದೆ. ಪ್ರಯಾಣಿಕರಿಗೆ ಉಂಟಾದ ಅನಾನುಕೂಲತೆಗಾಗಿ ವಿಷಾದಿಸುತ್ತೇವೆ ಎಂದು ಬಿಎಂಆರ್ಸಿಎಲ್ ತಿಳಿಸಿದೆ. ಈ ವಿಚಾರವಾಗಿ ಸಾಮಾಜಿಕ ಮಾಧ್ಯಮ ಎಕ್ಸ್ ಮೂಲಕ ಬಿಎಂಆರ್ ಸಿ ಎಲ್ ಮಾಹಿತಿ ನೀಡಿದೆ.
ಹಳದಿ ಮಾರ್ಗದ ಒಂದು ರೈಲಿನಲ್ಲಿ ತಾಂತ್ರಿಕ ತೊಂದರೆ ಉಂಟಾದ ಕಾರಣ, ರೈಲು ಸಂಚಾರದಲ್ಲಿ ವಿಳಂಬ ಉಂಟಾಗುವ ಸಾಧ್ಯತೆ ಇದೆ. ನಮ್ಮ ಮೆಟ್ರೋ ಪ್ರಯಾಣಿಕರ ಮಾಹಿತಿಗಾಗಿ ತಿಳಿಸಲಾಗಿದೆ. ಪ್ರಯಾಣಿಕರಿಗೆ ಉಂಟಾದ ಅನಾನುಕೂಲತೆಗಾಗಿ ವಿಷಾದಿಸುತ್ತೇವೆ’ ಎಂದು ನಮ್ಮ ಮೆಟ್ರೋ ಅಧಿಕೃತ ಎಕ್ಸ್ ಹ್ಯಾಂಡಲ್ನಲ್ಲಿ ಪೋಸ್ಟ್ ಮಾಡಲಾಗಿದೆ.
ಇನ್ನೂ ನಮ್ಮ ಮೆಟ್ರೋ ಯೆಲ್ಲೋ ಲೈನ್ನಲ್ಲಿ ಇತ್ತೀಚೆಗಷ್ಟೇ ಐದನೇ ರೈಲು ಸಂಚಾರ ಶುರುವಾಗಿತ್ತು. ಇದರಿಂದಾಗಿ ಪ್ರತಿ 15 ನಿಮಿಷಕ್ಕೆ ಒಂದು ರೈಲು ಸಂಚಾರ ಮಾಡುವಂತೆ ಆಗಿದ್ದು, ಪ್ರಯಾಣಿಕರಿಗೂ ಅನುಕೂಲವಾಗಿತ್ತು.



