ವಾಹನ ಸವಾರರ ಗಮನಕ್ಕೆ: ಬೆಂಗಳೂರಿನ ಈ ಮಾರ್ಗದಲ್ಲಿ ಸಂಚಾರ ಬಂದ್!

0
Spread the love

ಬೆಂಗಳೂರು:- ಸಿಲಿಕಾನ್ ಸಿಟಿ ಬೆಂಗಳೂರಿನ ಹಲವೆಡೆ ಇಂದು ವಾಹನ ಸಂಚಾರ ಬಂದ್ ಇರಲಿದೆ.

Advertisement

ಇಂದು ಮೆಟ್ರೋ ಹಳದಿ ಮಾರ್ಗಕ್ಕೆ ಪ್ರಧಾನಿ ನರೇಂದ್ರ ಮೋದಿ ಹಸಿರು ನಿಶಾನೆ ತೋರಿಸಲಿದ್ದಾರೆ. ಹೀಗಾಗಿ ನಗರದ ಹಲವೆಡೆ ಸಂಚಾರ ಬದಲಾವಣೆ ಮಾಡಲಾಗಿದ್ದು, ಪರ್ಯಾಯ ಮಾರ್ಗಗಳನ್ನು ಸೂಚಿಸಲಾಗಿದೆ. ಸದ್ಯ ಬೆಳಿಗ್ಗೆ 10:00 ಗಂಟೆಯಿಂದ ಮಧ್ಯಾಹ್ನ 2:30ರವರೆಗೆ ನೈಸ್ ರಸ್ತೆ ಮಾರ್ಗವಾಗಿ ಎಲೆಕ್ಟ್ರಾನಿಕ್ ಸಿಟಿ ಟೋಲ್ ಕಡೆಗೆ ಹೋಗುವ ವಾಹನಗಳ ಸಂಚಾರವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ.

ಸಂಚಾರ ನಿರ್ಬಂಧ:

* ಬನ್ನೇರುಘಟ್ಟ ರಸ್ತೆ ನೈಸ್ ಟೋಲ್‌ನಿಂದ ಎಲೆಕ್ಟ್ರಾನಿಕ್ ಸಿಟಿ ಟೋಲ್‌ವರೆಗೆ.

* ಕನಕಪುರ ರಸ್ತೆ ನೈಸ್ ಟೋಲ್‌ನಿಂದ ಎಲೆಕ್ಟ್ರಾನಿಕ್ ಸಿಟಿ ಟೋಲ್ ಕಡೆಗೆ ಹೋಗುವ ವಾಹನಗಳ ಸಂಚಾರ ನಿರ್ಬಂಧ.

* ನಾಯಂಡಹಳ್ಳಿ ನೈಸ್​​​ ಟೋಲ್ ಕಡೆಯಿಂದ ಎಲೆಕ್ಟ್ರಾನಿಕ್ ಸಿಟಿ ಟೋಲ್ ಕಡೆಗೆ ಹೋಗುವ ವಾಹನಗಳ ಸಂಚಾರ ನಿರ್ಬಂಧ.

* ಸೋಂಪುರ ನೈಸ್ ಟೋಲ್​​ನಿಂದ ಎಲೆಕ್ಟ್ರಾನಿಕ್ ಸಿಟಿ ಟೋಲ್ ಕಡೆಗೆ ಹೋಗುವ ವಾಹನಗಳ ಸಂಚಾರ ನಿರ್ಬಂಧ.

* ಪಿಇಎಸ್ ಕಾಲೇಜು ನೈಸ್ ಟೋಲ್​ನಿಂದ ಎಲೆಕ್ಟ್ರಾನಿಕ್ ಸಿಟಿ ಟೋಲ್ ಕಡೆಗೆ ಹೋಗುವ ವಾಹನಗಳ ಸಂಚಾರ ನಿರ್ಬಂಧ.

* ಸೋಂಪುರ ನೈಸ್ ಟೋಲ್​​ನಿಂದ ಎಲೆಕ್ಟ್ರಾನಿಕ್ ಸಿಟಿ ಟೋಲ್ ಕಡೆಗೆ ಹೋಗುವ ವಾಹನಗಳ ಸಂಚಾರ ನಿರ್ಬಂಧ.

* ಪಿಇಎಸ್ ಕಾಲೇಜು ನೈಸ್ ಟೋಲ್​ನಿಂದ ಎಲೆಕ್ಟ್ರಾನಿಕ್ ಸಿಟಿ ಟೋಲ್ ಕಡೆಗೆ ಹೋಗುವ ವಾಹನಗಳ ಸಂಚಾರ ನಿರ್ಬಂಧ.

* ಕೆಂಗೇರಿ ನೈಸ್ ಟೋಲ್‌ನಿಂದ ಎಲೆಕ್ಟ್ರಾನಿಕ್ ಸಿಟಿ ಟೋಲ್ ಕಡೆಗೆ ಹೋಗುವ ವಾಹನಗಳ ಸಂಚಾರ ನಿರ್ಬಂಧ.

* ಮಾಗಡಿ ರಸ್ತೆ ನೈಸ್ ಟೋಲ್​ನಿಂದ ಎಲೆಕ್ಟ್ರಾನಿಕ್ ಸಿಟಿ ಟೋಲ್ ಕಡೆಗೆ ಹೋಗುವ ವಾಹನಗಳ ಸಂಚಾರ ನಿರ್ಬಂಧ.

* ಮಾಧವರ ರಸ್ತೆ ನೈಸ್ ಟೋಲ್​ನಿಂದ ಎಲೆಕ್ಟ್ರಾನಿಕ್ ಸಿಟಿ ಟೋಲ್ ಕಡೆಗೆ ಹೋಗುವ ವಾಹನಗಳ ಸಂಚಾರ ನಿರ್ಬಂಧ.

ಪರ್ಯಾಯ ಮಾರ್ಗ ಇಲ್ಲಿದೆ:

ನೆಲಮಂಗಲ ನೈಸ್ ಟೋಲ್-ಮಾಗಡಿ ರಸ್ತೆ ನೈಸ್ ಟೋಲ್-ಕೆಂಗೇರಿ ನೈಸ್ ಟೋಲ್-ಕನಕಪುರ ಟೋಲ್ ಮಾರ್ಗವಾಗಿ ಎಲೆಕ್ಟ್ರಾನಿಕ್ ಸಿಟಿ ಟೋಲ್ ಕಡೆಗೆ ಸಂಚರಿಸುವ ವಾಹನಗಳನ್ನು ಬನ್ನೇರುಘಟ್ಟ ರಸ್ತೆ ನೈಸ್ ಟೋಲ್‌ನಲ್ಲಿ ತಡೆದು, ಬನ್ನೇರುಘಟ್ಟ ರಸ್ತೆಗೆ ವಾಹನಗಳನ್ನು ಡೈವರ್ಶನ್ ಮಾಡುತ್ತಿದ್ದು, ಎಲೆಕ್ಟ್ರಾನಿಕ್ ಸಿಟಿ ಕಡೆಗೆ ಚಲಿಸುವ ವಾಹನಗಳು ಪ್ರಮುಖವಾಗಿ ಬನ್ನೇರುಘಟ್ಟ ರಸ್ತೆ ಮಾರ್ಗವಾಗಿ-ನೈಸ್ ರಸ್ತೆ ಜಂಕ್ಷನ್-ಶೇರ್‌ವುಡ್ ಜಂಕ್ಷನ್-ಕೋಳಿಫಾರಂಗೇಟ್ ಜಂಕ್ಷನ್-ಬನ್ನೇರುಘಟ್ಟ ಗಾಮ-ಜಿಗಣಿ ಮಾರ್ಗವಾಗಿ ಹೊಸೂರು ರಸ್ತೆ/ಎಲೆಕ್ಟ್ರಾನಿಕ್ ಸಿಟಿ ಕಡೆಗೆ ತಲುಪಬಹುದಾಗಿದೆ.

ದಾಬಸ್‌ಪೇಟೆ ಬಳಿ ಎಡ ತಿರುವು ಪಡೆದು-ದೊಡ್ಡಬಳ್ಳಾಪುರ-ದೇವನಹಳ್ಳಿ-ಸೂಲಿಬೆಲೆ-ಹೊಸಕೋಟೆ-ಮಾರ್ಗ ಚಲಿಸಿ-ಚಂದಾಪುರ-ಅತ್ತಿಬೆಲೆ-ಹೊಸೂರು ರಸ್ತೆ ತಲುಪಬಹುದಾಗಿದೆ.


Spread the love

LEAVE A REPLY

Please enter your comment!
Please enter your name here