ಬೆಂಗಳೂರು:– ನಗರದ ವಾಹನ ಸವಾರರು ಮನೆಯಿಂದ ಹೊರಗೆ ಬರೋ ಮುನ್ನ ಈ ಸುದ್ದಿ ನೀವು ಓದಲೇಬೇಕು. ಎಸ್, ನಗರದ ಹಲವೆಡೆ ಇಂದಿನಿಂದ ಎರಡು ದಿನ ಸಂಚಾರ ಬಂದ್ ಮಾಡಲಾಗಿದೆ.
ಪುಲಕೇಶಿನಗರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಸೆಪ್ಪಿಂಗ್ಸ್ ರಸ್ತೆಯಲ್ಲಿರುವ ಮುತ್ಯಾಲಮ್ಮ ದೇವಿ ದೇವಸ್ಥಾನದ ವತಿಯಿಂದ ಮುತ ಮುತ್ಯಾಲಮ್ಮ ದೇವಿಯವರ ರಥೋತ್ಸವ ಮತ್ತು ದೇವರ ಪಲ್ಲಕ್ಕಿಗಳ ಉತ್ಸವದ ಕಾರ್ಯಕ್ರಮ ಏರ್ಪಡಿಸಿರುವುದರಿಂದ ಸಂಚಾರದಲ್ಲಿ ಕೆಲವು ಮಾರ್ಪಾಡು ಮಾಡಲಾಗಿದೆ. ಈ ಬಗ್ಗೆ ಬೆಂಗಳೂರು ಸಂಚಾರ ಪೂರ್ವ, ಉಪ ಪೊಲೀಸ್ ಆಯುಕ್ತರು ಮಾಹಿತಿ ನೀಡಿದ್ದಾರೆ.
ಇಂದು ಬೆಳಗ್ಗೆ 11 ಗಂಟೆಯಿಂದ ಗುರುವಾರ ಮಧ್ಯಾಹ್ನ 2 ಗಂಟೆಯ ವರೆಗೆ ಸಂಚಾರ ನಿರ್ಬಂಧ ಜಾರಿಯಲ್ಲಿರಲಿದೆ.
ಸಂಚಾರ ನಿರ್ಬಂಧ ಇರುವ ಏರಿಯಾಗಳಿವು:-
ಕೋಲ್ಡ್ ಪಾರ್ಕ್ ಜಂಕ್ಷನ್‌ನಿಂದ ಸೆಪ್ಪಿಂಗ್ ರಸ್ತೆ ಕಡೆಗೆ ಹೋಗುವ ಎಲ್ಲಾ ರೀತಿಯ ವಾಹನಗಳ ಸಂಚಾರವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿರುತ್ತದೆ. (ಎರಡೂ ದಿಕ್ಕಿನಲ್ಲೂ)
ಸೆಂಟ್ ಜಾನ್ಸ್ ಚರ್ಚ್ ರಸ್ತೆ ಕಡೆಯಿಂದ ನಾರಾಯಣ ಪಿಳ್ಳೆ ಸ್ಟ್ರೀಟ್ ಕಡೆಗೆ ಹೋಗುವ ಎಲ್ಲಾ ರೀತಿಯ ವಾಹನಗಳ ಸಂಚಾರವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿರುತ್ತದೆ. (ಎರಡೂ ದಿಕ್ಕಿನಲ್ಲೂ)
ವಾರ್ ಮೆಮೋರಿಯಲ್ ಜಂಕ್ಷನ್ ಕಡೆಯಿಂದ ಸೆಂಟ್ ಜಾನ್ಸ್ ಚರ್ಚ್ ರಸ್ತೆ (ಹೇನ್ ಜಂಕ್ಷನ್ ವರೆಗೆ) ಕಡೆಗೆ ಹೋಗುವ ಎಲ್ಲಾ ರೀತಿಯ ವಾಹನಗಳ ಸಂಚಾರವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿರುತ್ತದೆ.
ಪರ್ಯಾಯ ಮಾರ್ಗ ವಿವರ:-
ಕೋಲ್ಡ್ ಪಾರ್ಕ್ ಜಂಕ್ಷನ್ ಹಾಗೂ ನಾರಾಯಣ ಪಿಳ್ಳೆ ಸ್ಟ್ರೀಟ್ ಜಂಕ್ಷನ್‌ನಿಂದ ಸೆಪ್ಪಿಂಗ್ ರಸ್ತೆ ಮೂಲಕ ಶಿವಾಜಿನಗರ ಕಡೆಗೆ ಹೋಗುವ ವಾಹನ ಚಾಲಕರು/ಸವಾರರು ಸೆಂಟ್ ಜಾನ್ಸ್ ಚರ್ಚ್ ರಸ್ತೆಯಲ್ಲಿ ನೇರವಾಗಿ ಚಲಿಸಿ ಹೇನ್ಸ್ ಜಂಕ್ಷನ್‌ನಲ್ಲಿ ಎಡತಿರುವು ಪಡೆದು ಜುಮ್ಮಾ ಮಸೀದಿ ರಸ್ತೆ ಮೂಲಕ ಶಿವಾಜಿನಗರ ಕಡೆಗೆ ಸಂಚರಿಸಬಹುದಾಗಿರುತ್ತದೆ.
ವಾರ್ ಮೆಮೋರಿಯಲ್ ಜಂಕ್ಷನ್ ನಿಂದ ಸೆಂಟ್ ಜಾನ್ಸ್ ಚರ್ಚ್ ರಸ್ತೆ ಮೂಲಕ ಹೇನ್ಸ್ ಜಂಕ್ಷನ್ ಕಡೆಗೆ ಹೋಗುವ ಎಲ್ಲಾ ವಾಹನ ಚಾಲಕರು/ಸವಾರರು ವಾರ್ ಮೆಮೋರಿಯಲ್ ಜಂಕ್ಷನ್‌ನಲ್ಲಿ ಬಲ ತಿರುವು ಪಡೆದು ಅಸ್ಸಯೇ ರಸ್ತೆಯಲ್ಲಿ ನೇರವಾಗಿ ಚಲಿಸಿ ಸಿಂಧಿ ಕಾಲೋನಿ ಜಂಕ್ಷನ್‌ನಲ್ಲಿ ಎಡ ತಿರುವು ಪಡೆದು ಕೋಲ್ಡ್ ರಸ್ತೆಯಲ್ಲಿ ಬಲತಿರುವು ಪಡೆದು ಕೋಲ್ಸ್ ರಸ್ತೆಯಲ್ಲಿ ನೇರವಾಗಿ ಚಲಿಸಿ ಹೇನ್ಸ್ ರಸ್ತೆಯಲ್ಲಿ ಎಡತಿರುವು ಪಡೆದು ಹೇನ್ಸ್ ಜಂಕ್ಷನ್ ಕಡೆಗೆ ಸಂಚರಿಸಬಹುದಾಗಿರುತ್ತದೆ.