ಬೆಂಗಳೂರು:- ಇದೇ ಜನವರಿ 19 ರಂದು ನೇರಳೆ ಮಾರ್ಗದ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು BMRCL ಮಾಹಿತಿ ನೀಡಿದೆ.
Advertisement
ಕಬ್ಬನ್ ಪಾರ್ಕ್- ಎಂಜಿ ರಸ್ತೆ ಮೆಟ್ರೋ ನಿಲ್ದಾಣಗಳ ನಡುವೆ ಹಳಿ ನಿರ್ವಹಣಾ ಕಾಮಗಾರಿ ಹಿನ್ನೆಲೆ ಭಾನುವಾರ ನೇರಳೆ ಮಾರ್ಗದಲ್ಲಿ ಮೂರು ಗಂಟೆಗಳ ಕಾಲ ಬೆಳಗ್ಗೆ 7 ಗಂಟೆಯಿಂದ ಬೆಳಗ್ಗೆ 10 ಗಂಟೆಯವರೆಗೆ ಮೆಟ್ರೋ ಸೇವೆ ಲಭ್ಯವಿರುವುದಿಲ್ಲ ಎಂದು ನಮ್ಮ ಮೆಟ್ರೋ ಪ್ರಕಟಣೆಯಲ್ಲಿ ತಿಳಿಸಿದೆ.
ಚಲ್ಲಘಟ್ಟ-ಮೆಜೆಸ್ಟಿಕ್, ವೈಟ್‌ಫೀಲ್ಡ್– ಇಂದಿರಾನಗರ ನಡುವೆ ಎಂದಿನಂತೆ ಮೆಟ್ರೋ ಸೇವೆ ಇರಲಿದೆ. ಹಸಿರು ಮಾರ್ಗದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ಹೀಗಾಗಿ ಪ್ರಯಾಣಿಕರು ಸಹಕರಿಸಬೇಕೆಂದು BMRCL ಕೋರಿದೆ.