ಎಣ್ಣೆಪ್ರಿಯರ ಗಮನಕ್ಕೆ: ಕರ್ನಾಟಕದಲ್ಲಿ ಈ ದಿನ ಎಣ್ಣೆ ಮಾರಾಟ ಬಂದ್!

0
Spread the love

ಬೆಂಗಳೂರು:- ಅಬಕಾರಿ ಇಲಾಖೆ ಅಧಿಕಾರಿಗಳು ಕೊಡುತ್ತಿರುವ ಕಿರುಕುಳದ ವಿರುದ್ಧ ಬೇಸತ್ತಿರುವ ಮದ್ಯ ಮಾರಾಟಗಾರರು ನವೆಂಬರ್ 20ರಂದು ಎಣ್ಣೆ ಮಾರಾಟ ಮಾಡದಿರಲು ನಿರ್ಧಾರ ಮಾಡಿದ್ದಾರೆ.

Advertisement

ಅಬಕಾರಿ ಅಧಿಕಾರಿಗಳಿಂದ ಆಗುತ್ತಿರುವ ಕಿರುಕುಳ ತಪ್ಪಿಸಿ ಮತ್ತು ಹಲವು ಬೇಡಿಕೆಗಳನ್ನ ಈಡೇರಿಸುವಂತೆ ಒತ್ತಾಯಿಸಿ ನವೆಂಬರ್ 20 ರಂದು ಕರ್ನಾಟಕದಲ್ಲಿ ಮದ್ಯ ಮಾರಾಟ ಬಂದ್ ಮಾಡಿ ಹೋರಾಟ ನಡೆಸಲಾಗುವುದು ಎಂದು ಮದ್ಯ ಮಾರಾಟಗಾರರ ಸಂಘದ ಪ್ರಧಾನ ಕಾರ್ಯದರ್ಶಿ ಬಿ ಗೋವಿಂದರಾಜ್ ಹೆಗ್ಡೆ ತಿಳಿಸಿದ್ದಾರೆ.

ಇದು ಮದ್ಯಪ್ರಿಯರಿಗೆ ಶಾಕಿಂಗ್ ಸುದ್ದಿ ಅಂದ್ರೆ ತಪ್ಪಾಗೋದಿಲ್ಲ. ಇದೇ ತಿಂಗಳಲ್ಲಿ ಒಂದು ದಿನ ಕರ್ನಾಟಕದಲ್ಲಿ ಎಣ್ಣೆ ಮಾರಾಟ ನಿಷೇಧ ಮಾಡಲಾಗಿದೆ.

ಅಬಕಾರಿ ಇಲಾಖೆಯಲ್ಲಿ ಮಿತಿಮೀರಿದ ಭ್ರಷ್ಟಾಚಾರ ಆರೋಪ ಕೇಳಿಬಂದಿದೆ. ವರ್ಗಾವಣೆ, ಪ್ರಮೋಷನ್​ಗೆ ಸನ್ನದುದಾರರಿಂದ ಮನಸೋ ಇಚ್ಛೆ ಕೋಟಿ ಕೋಟಿ ರೂ. ಲಂಚ ಕೇಳಲಾಗುತ್ತಿದೆ ಎನ್ನಲಾಗುತ್ತಿದೆ. ಅಧಿಕಾರಿಗಳ ಲಂಚಾವತಾರದಿಂದ‌ ನಕಲಿ ಅಂತಾರಾಜ್ಯ ಮದ್ಯ ಹೆಚ್ಚಳವಾಗಿದೆ. ಹೀಗಾಗಿ ಅಬಕಾರಿ ಅಧಿಕಾರಿಗಳ ವಿರುದ್ಧ ಮದ್ಯದಂಗಡಿ ಮಾಲೀಕರು ಸಮರಕ್ಕೆ ಮುಂದಾಗಿದ್ದು, ನವೆಂಬರ್ 20ರಂದು ಕರ್ನಾಟಕದಾದ್ಯಂತ ಮದ್ಯ ಮಾರಾಟ ಬಂದ್​ಗೆ ಕರೆ ನೀಡಲಾಗಿದೆ.


Spread the love

LEAVE A REPLY

Please enter your comment!
Please enter your name here