ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ ತಾಲೂಕಿನ ಸುಪ್ರಸಿದ್ಧ ಎತ್ತಿನಭುಜ ಪ್ರವೇಶಕ್ಕೆ ಇಂದಿನಿಂದ ಒಂದು ತಿಂಗಳು ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ.
Advertisement
ಜಿಲ್ಲೆಯಲ್ಲಿ ನಿರಂತರ ಮಳೆಯಿಂದಾಗಿ ಭಾರೀ ಮಂಜು ಕವಿಯುತ್ತಿದ್ದು, ಪ್ರವಾಸಿಗರ ಹಿತದೃಷ್ಟಿಯಿಂದ ಅರಣ್ಯ ಇಲಾಖೆ ಚಾರಣಕ್ಕೆ ಬ್ರೇಕ್ ಹಾಕಿದೆ. ಚಾರಣ ಮಾಡುವ ವೇಳೆ ಅನಾಹುತವಾದರೆ ರಕ್ಷಣೆ ಮಾಡೋದು ಭಾರೀ ಕಷ್ಟಸಾಧ್ಯ.
ಜೊತೆಗೆ ಯಾವುದೇ ವಾಹನಗಳು ಹೋಗುವುದಿಲ್ಲ, ಹೊತ್ತೇ ತರಬೇಕು. ಅಲ್ಲದೇ ಕಾಡುಪ್ರಾಣಿಗಳ ಕಾಟ, ಮಳೆ, ಜಾರುವ ಪ್ರದೇಶವಾಗಿದ್ದು, ಸ್ಥಳೀಯರು ಚಾರಣವನ್ನ ಬಂದ್ ಮಾಡುವಂತೆ ಆಗ್ರಹಿಸಿದ್ದರು. ಹೀಗಾಗಿ ಇದೆಲ್ಲವನ್ನು ಗಮನದಲ್ಲಿಟ್ಟುಕೊಂಡು ಇಂದಿನಿಂದ ಒಂದು ತಿಂಗಳ ಕಾಲ ಸಂಪೂರ್ಣ ಬಂದ್ ಮಾಡಿದ್ದಾರೆ.