ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ: ಸಮಾಜದ ಸ್ವಾಸ್ಥ್ಯ ಕಾಪಾಡುವಲ್ಲಿ ಪತ್ರಕರ್ತರ ಪಾತ್ರ ಪ್ರಮುಖವಾಗಿದೆ. ಈ ನಿಟ್ಟಿನಲ್ಲಿ ಪತ್ರಕರ್ತರು ಅಧ್ಯಯನಶೀಲರಾದಾಗ ತಮ್ಮ ವರದಿಗಳಿಗೆ ಹೆಚ್ಚಿನ ಮಹತ್ವ ಬರಲಿದೆ ಎಂದು ಶಿರಹಟ್ಟಿಯ ಶ್ರೀ ಜ.ಫ. ದಿಂಗಾಲೇಶ್ವರ ಸ್ವಾಮೀಜಿ ಹೇಳಿದರು.
ಅವರು ಬುಧವಾರ ಶಿರಹಟ್ಟಿಯ ಶ್ರೀ ಮಹರ್ಷಿ ವಾಲ್ಮೀಕಿ ಸಮುದಾಯ ಭವನದಲ್ಲಿ ತಾಲೂಕಾ ಮಟ್ಟದ ಪತ್ರಿಕಾ ದಿನಾಚರಣೆ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಮಾತನಾಡಿದರು.
ಇತ್ತೀಚೆಗೆ ಪತ್ರಿಕೆಗಳಲ್ಲಿ ಬರುವ ಸುದ್ದಿಗಳ ಗುಣಮಟ್ಟ ಕಡಿಮೆಯಾಗುತ್ತಿದೆ. ವಸ್ತುನಿಷ್ಠ ಬರಹಗಳಿಗೆ ಬರ ಬಂದಂತಾಗುತ್ತಿರುವುದು ಕಳವಳಕಾರಿಯಾಗಿದ್ದು, ಓದುಗರ ಸಂಖ್ಯೆಯೂ ಕಡಿಮೆಯಾಗುತ್ತಿದೆ. ಆದ್ದರಿಂದ ನಿಮ್ಮ ಬರವಣಿಗೆಯ ಮೂಲಕ ಓದುಗರನ್ನು ಆಕರ್ಷಿಸುವ ಕೆಲಸವಾಗಬೇಕು. ಯಾವುದೇ ಒತ್ತಡಕ್ಕೆ ಒಳಗಾಗದೇ ವಸ್ತುನಿಷ್ಠ ಬರವಣಿಗೆಯ ಮೂಲಕ ಸಮಾಜದಲ್ಲಿ ಸ್ವಾಸ್ಥ್ಯವನ್ನು ಕಾಪಾಡಬೇಕೆಂದು ಹೇಳಿದರು.
ಮಾಜಿ ಶಾಸಕರಾದ ರಾಮಕೃಷ್ಣ ದೊಡ್ಡಮನಿ, ರಾಮಣ್ಣ ಲಮಾಣಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಸುಜಾತಾ ದೊಡ್ಡಮನಿ, ಜಿಲ್ಲಾ ಕಾರ್ಯನಿರತ ಪತ್ರಕರ್ತ ಸಂಘದ ಜಿಲ್ಲಾಧ್ಯಕ್ಷ ರಾಜು ಹೆಬ್ಬಳ್ಳಿ ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಂಜುನಾಥ ಆರೆಪಲ್ಲಿ ವಹಿಸಿದ್ದರು. ಪಟ್ಟಣ ಪಂಚಾಯಿತಿ ಅಧ್ಯಕ್ಷೆ ದೇವಕ್ಕ ಗುಡಿಮನಿ, ಜಿ.ಪಂ ಮಾಜಿ ಅಧ್ಯಕ್ಷ ವಿಶ್ವನಾಥ ಕಪ್ಪತ್ತನವರ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ಡಿ. ಮಾಗಡಿ, ಜಿ.ಪಂ ಮಾಜಿ ಸದಸ್ಯ ಶಿವಪ್ರಕಾಶ ಮಹಾಜನಶೆಟ್ಟರ, ವಿಪ್ರ ಸಮಾಜದ ಹಿರಿಯ ಮುಖಂಡ ಎನ್.ಆರ್. ಕುಲಕರ್ಣಿ, ಡಿ.ಕೆ. ಹೊನ್ನಪ್ಪನವರ, ನಾಗರಾಜ ಲಕ್ಕುಂಡಿ, ತಿಪ್ಪಣ್ಣ ಕೊಂಚಿಗೇರಿ, ತಿಮ್ಮರಡ್ಡಿ ಮರಡ್ಡಿ, ಮೋಹನ ಗುತ್ತೆಮ್ಮನವರ, ಡಾ. ಸುನೀಲ ಬುರಬರೆ, ಸಿ.ಸಿ. ನೂರಶೆಟ್ಟರ, ಎಚ್.ಎಂ. ದೇವಗಿರಿ, ಧರ್ಮಸ್ಥಳ ಸಂಘದ ಯೋಜನಾಧಿಕಾರಿ ಪುನೀತ ಓಲೇಕಾರ, ಬಸವರಾಜ ತುಳಿ, ಶಿವಪ್ಪ ಹದ್ಲಿ, ವಿರೂಪಾಕ್ಷಪ್ಪ ಕಣವಿ, ಪ್ರಕಾಶ ಭೋರಶೆಟ್ಟರ, ಮಹಾಂತೇಶ ದಶಮನಿ, ರವಿ ಗುಡಿಮನಿ, ಎಂ.ಕೆ. ಲಮಾಣಿ, ಹಸನ ತಹಸೀಲ್ದಾರ, ತಹಸೀಲ್ದಾರ ರಾಘವೇಂದ್ರ ರಾವ್, ಪಿಎಸ್‌ಐ ಚನ್ನಯ್ಯ ದೇವೂರ ಮುಂತಾದವರು ಉಪಸ್ಥಿತರಿದ್ದರು.
ಶಿರಹಟ್ಟಿಯಲ್ಲಿ ಪತ್ರಿಕಾ ಭವನ ನಿರ್ಮಾಣಕ್ಕೆ ಶ್ರೀಮಠದ ವತಿಯಿಂದ ಒಂದು ಲಕ್ಷ ರೂ ನೀಡುವುದಾಗಿ ಜ.ಫ. ದಿಂಗಾಲೇಶ್ವರ ಸ್ವಾಮೀಜಿ ತಮ್ಮ ಆಶೀರ್ವಚನದಲ್ಲಿ ಘೋಷಣೆ ಮಾಡಿದರು.
ಹಿರಿಯ ಪತ್ರಕರ್ತ ಜಿ.ಬಿ. ಹೆಸರೂರ, ಪವಿತ್ರಾ ಕುರ್ತಕೋಟಿ, ಯಲ್ಲಪ್ಪ ಗೋಶಲ್ಯನವರ ಇವರನ್ನು ಸನ್ಮಾನಿಸಲಾಯಿತು.