HomeKarnataka Newsಆಗಸ್ಟ್‌ 13 ಕರ್ನಾಟಕ ಬಂದ್ ಫಿಕ್ಸ್! 'ವಾಪಸ್ ಪಡೆಯುವ ಪ್ರಶ್ನೆಯೇ ಇಲ್ಲ'- ವಾಟಾಳ್ ನಾಗರಾಜ್

ಆಗಸ್ಟ್‌ 13 ಕರ್ನಾಟಕ ಬಂದ್ ಫಿಕ್ಸ್! ‘ವಾಪಸ್ ಪಡೆಯುವ ಪ್ರಶ್ನೆಯೇ ಇಲ್ಲ’- ವಾಟಾಳ್ ನಾಗರಾಜ್

For Dai;y Updates Join Our whatsapp Group

ಮೈಸೂರು: ಆಗಸ್ಟ್‌ 13ರಂದು ಘೋಷಿಸಿರುವ ಕರ್ನಾಟಕ ಬಂದ್‌ ಅನ್ನು ಯಾವುದೇ ಕಾರಣಕ್ಕೂ ಹಿಂಪಡೆಯುವುದಿಲ್ಲ ಎಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಸ್ಪಷ್ಟಪಡಿಸಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಮಗ್ರ ಕನ್ನಡಿಗರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಕರ್ನಾಟಕ ಬಂದ್‌ಗೆ ಕರೆ ನೀಡಲಾಗಿದೆ ಎಂದು ಹೇಳಿದರು.

ಕಾವೇರಿ ನೀರು ಹಂಚಿಕೆ ವಿಚಾರ ಮಾತ್ರವಲ್ಲದೆ, ರಾಜ್ಯದ ಗಡಿ ವಿವಾದ, ಯುವಕರಿಗೆ ಉದ್ಯೋಗ, ಮೈಸೂರಿನ ಸಮಗ್ರ ಅಭಿವೃದ್ಧಿ, ಬೆಳಗಾವಿಯಲ್ಲಿ ಎಂಇಎಸ್ ಚಟುವಟಿಕೆ ಸೇರಿದಂತೆ ಹಲವು ವಿಷಯಗಳನ್ನು ಮುಂದಿಟ್ಟುಕೊಂಡು ಬಂದ್‌ಗೆ ಕರೆ ನೀಡಲಾಗಿದೆ ಎಂದು ತಿಳಿಸಿದರು.

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಬಂದ್‌ ವಾಪಸ್ ಪಡೆಯುವಂತೆ ಮನವಿ ಮಾಡಿರುವ ವಿಚಾರಕ್ಕೆ ಪ್ರತಿಕ್ರಿಯಿಸಿದ ವಾಟಾಳ್ ನಾಗರಾಜ್, “ಯಾವುದೇ ಕಾರಣಕ್ಕೂ ಬಂದ್‌ ಹಿಂಪಡೆಯುವುದಿಲ್ಲ. ಈಗಾಗಲೇ ದಿನಾಂಕ ನಿಗದಿಯಾಗಿದೆ. ಆಗಸ್ಟ್‌ 13ರಂದು ಅಖಂಡ ಕರ್ನಾಟಕ ಬಂದ್‌ ನಡೆಯಲಿದೆ” ಎಂದು ಸ್ಪಷ್ಟಪಡಿಸಿದರು.

ಆಗಸ್ಟ್‌ 13ರಂದು ನಡೆಯಲಿರುವ ಕರ್ನಾಟಕ ಬಂದ್‌ಗೆ ವಿವಿಧ ಕನ್ನಡಪರ ಸಂಘಟನೆಗಳು ಬೆಂಬಲ ಸೂಚಿಸುವ ಸಾಧ್ಯತೆ ಇದ್ದು, ಮುಂದಿನ ದಿನಗಳಲ್ಲಿ ಈ ಕುರಿತು ಮತ್ತಷ್ಟು ಚರ್ಚೆಗಳು ನಡೆಯುವ ನಿರೀಕ್ಷೆಯಿದೆ.

 

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img