ನ್ಯೂಯಾರ್ಕ್: ಆಸ್ಟಿನ್‌ನಲ್ಲಿ ನಡೆದ ಗುಂಡಿನ ದಾಳಿಯಲ್ಲಿ 2 ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, 14ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಮೃತರಲ್ಲಿ ಭಾರತೀಯ ಮೂಲದ ವಿದ್ಯಾರ್ಥಿನಿ ಸವಿತಾ ಶಾನ್ ಇದ್ದಾರೆ.
ದಾಳಿ ನಡೆಸಿದ ನ್ಡಿಯಾಗಾ ಡಯಾಗ್ನೆ, ಸಾರ್ವಜನಿಕ ಪ್ರದೇಶದಲ್ಲಿ ನಿಂತು ಜನರ ಮೇಲೆ ನಿರಂತರವಾಗಿ ಗುಂಡು ಹಾರಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಆತ ಇರಾನ್ ಧ್ವಜ ಚಿಹ್ನೆ ಧರಿಸಿದ್ದನೆಂಬ ಮಾಹಿತಿ ಕೂಡ ಹೊರಬಂದಿದ್ದು, ದಾಳಿಯ ಹಿಂದೆ ರಾಜಕೀಯ ಪ್ರತೀಕಾರದ ಉದ್ದೇಶ ಇರಬಹುದು ಎಂದು ಶಂಕಿಸಲಾಗಿದೆ.
ಫೆಡರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್ ಮತ್ತು ಸ್ಥಳೀಯ ಪೊಲೀಸರು ಈ ಪ್ರಕರಣದ ತನಿಖೆ ಮುಂದುವರಿಸಿದ್ದಾರೆ. ವಿಶ್ವವಿದ್ಯಾಲಯ ಕ್ಯಾಂಪಸ್‌ನಲ್ಲಿ ಭದ್ರತೆ ಹೆಚ್ಚಿಸಲಾಗಿದೆ ಎಂದು ಟೆಕ್ಸಾಸ್ ವಿಶ್ವವಿದ್ಯಾಲಯ ಅಧಿಕಾರಿಗಳು ತಿಳಿಸಿದ್ದಾರೆ.
ಈ ಘಟನೆಯಿಂದ ಅಮೆರಿಕದಲ್ಲಿ ವಿದ್ಯಾರ್ಥಿ ಸುರಕ್ಷತೆ ಕುರಿತು ಹೊಸ ಚರ್ಚೆ ಆರಂಭವಾಗಿದೆ.



