ಚಾಂಪಿಯನ್ಸ್ ಟ್ರೋಫಿಯ ಹೈವೋಲ್ಟೇಜ್ ಪಂದ್ಯ ಶುರುವಾಗಿದೆ. ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು ಮುಖಾಮುಖಿಯಾಗಲಿದೆ. ದುಬೈ ಇಂಟರ್ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿದೆ. ಗುಂಪು ಹಂತದಲ್ಲಿ ಎರಡೂ ತಂಡಗಳು ಉತ್ತಮ ಪ್ರದರ್ಶನ ನೀಡಿದ್ದು, ಟೀಂ ಇಂಡಿಯಾ ಆಡಿದ ಮೂರು ಪಂದ್ಯಗಳಲ್ಲೂ ಜಯ ಸಾಧಿಸಿದೆ.
ಇತ್ತ, ಆಸ್ಟ್ರೇಲಿಯಾ 1 ಪಂದ್ಯವನ್ನು ಗೆದ್ದಿದ್ದರೆ 2 ಪಂದ್ಯ ಮಳೆಯಿಂದ ರದ್ದಾಗಿತ್ತು. ಈ ಎರಡೂ ತಂಡಗಳು ತಮ್ಮ ಮೂರನೇ ಪ್ರಶಸ್ತಿಯನ್ನು ಎದುರು ನೋಡುತ್ತಿವೆ. ಇನ್ನೂ ಟಾಸ್ ಗೆದ್ದ ಆಸ್ಟ್ರೇಲಿಯಾ ನಾಯಕ ಸ್ಟೀವ್ ಸ್ಮಿತ್ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಹೀಗಾಗಿ ಟೀಂ ಇಂಡಿಯಾ ಮೊದಲು ಬೌಲಿಂಗ್ ಮಾಡಲಿದೆ.
ಆಸ್ಟ್ರೇಲಿಯಾ ತಂಡ
ಕೂಪರ್ ಕಾನೊಲಿ, ಟ್ರಾವಿಸ್ ಹೆಡ್, ಸ್ಟೀವ್ ಸ್ಮಿತ್ (ನಾಯಕ), ಮಾರ್ನಸ್ ಲಬುಶೇನ್, ಜೋಶ್ ಇಂಗ್ಲಿಸ್ (ವಿಕೆಟ್ ಕೀಪರ್), ಅಲೆಕ್ಸ್ ಕ್ಯಾರಿ, ಗ್ಲೆನ್ ಮ್ಯಾಕ್ಸ್‌ವೆಲ್, ಬೆನ್ ದ್ವಾರಶುಯಿಸ್, ನಾಥನ್ ಎಲ್ಲಿಸ್, ಆಡಮ್ ಜಂಪಾ, ತನ್ವೀರ್ ಸಂಘ.
ಭಾರತ ತಂಡ
ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಅಕ್ಷರ್ ಪಟೇಲ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜ, ಮೊಹಮ್ಮದ್ ಶಮಿ, ಕುಲ್ದೀಪ್ ಯಾದವ್, ವರುಣ್ ಚಕ್ರವರ್ತಿ.