ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ 5 ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯ ಕ್ಯಾನ್‌ಬೆರಾದ ಮನುಕಾ ಓವಲ್‌ನಲ್ಲಿ ನಡೆದಿದ್ದು, ಮಳೆಯಿಂದಾಗಿ ರದ್ದಾಯಿತು. ಇದೀಗ ಟಿ20 ಸರಣಿಯ ಎರಡನೇ ಪಂದ್ಯ ಇಂದು ಮೆಲ್ಬೋರ್ನ್ ಮೈದಾನದಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದೆ. ಟಾಸ್ ಸೋತ ನಂತರ, ಸೂರ್ಯಕುಮಾರ್ ಯಾದವ್ ಮೊದಲು ಬ್ಯಾಟಿಂಗ್ ಮಾಡಲು ಬಯಸುವುದಾಗಿ ಹೇಳಿದರು.
ಕ್ಯಾನ್ಬೆರಾದಲ್ಲಿ ನಡೆದಿದ್ದ ಉಭಯ ತಂಡಗಳ ನಡುವಿನ ಮೊದಲ ಪಂದ್ಯ ಮಳೆಯಿಂದಾಗಿ ರದ್ದುಗೊಂಡಿತ್ತು. ಇಂದಿನ ಪಂದ್ಯಕ್ಕೂ ಮಳೆ ಅಡ್ಡಿ ಪಡಿಸುವ ಸಾಧ್ಯತೆ ಹೆಚ್ಚಿದೆ. ಏತನ್ಮಧ್ಯೆ, ಇಂದಿನ ಪಂದ್ಯಕ್ಕೆ ಆಸ್ಟ್ರೇಲಿಯಾ ಆಡುವ ಹನ್ನೊಂದರಲ್ಲಿ ಒಂದು ಬದಲಾವಣೆ ಮಾಡಿದೆ.
ಮೊದಲ ಪಂದ್ಯದಲ್ಲಿ ಕಣಕ್ಕಿಳಿದಿದ್ದ ಜೋಶ್ ಫಿಲಿಪ್ ಅವರನ್ನು ಕೈಬಿಡಲಾಗಿದ್ದು ಅವರ ಸ್ಥಾನಕ್ಕೆ ಮ್ಯಾಥ್ಯು ಶಾರ್ಟ್ ಅವರನ್ನು ತಂಡಕ್ಕೆ ಕರೆತರಲಾಗಿದೆ. ಇನ್ನು ಭಾರತ ತಂಡದಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ. ಮೊದಲ ಪಂದ್ಯದಲ್ಲಿ ಆಡಿರುವ ಆಟಗಾರರೇ ಎರಡನೇ ಪಂದ್ಯದಲ್ಲಿ ಕಣಕ್ಕಿಳಿಯಲಿದ್ದಾರೆ.
ಭಾರತ ತಂಡ
ಅಭಿಷೇಕ್ ಶರ್ಮಾ, ಶುಭ್ಮನ್ ಗಿಲ್, ಸೂರ್ಯಕುಮಾರ್ ಯಾದವ್ (ನಾಯಕ), ತಿಲಕ್ ವರ್ಮಾ, ಸಂಜು ಸ್ಯಾಮ್ಸನ್, ಶಿವಂ ದುಬೆ, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಹರ್ಷಿತ್ ರಾಣಾ, ವರುಣ್ ಚಕ್ರವರ್ತಿ, ಜಸ್ಪ್ರೀತ್ ಬುಮ್ರಾ
ಆಸ್ಟ್ರೇಲಿಯಾ ತಂಡ
ಟ್ರಾವಿಸ್ ಹೆಡ್, ಮಿಚೆಲ್ ಮಾರ್ಷ್ (ನಾಯಕ), ಜೋಶ್ ಇಂಗ್ಲಿಸ್, ಟಿಮ್ ಡೇವಿಡ್, ಮಿಚೆಲ್ ಓವನ್, ಮಾರ್ಕಸ್ ಸ್ಟೊಯಿನಿಸ್, ಮ್ಯಾಥ್ಯೂ ಶಾರ್ಟ್, ಕ್ಸೇವಿಯರ್ ಬಾರ್ಟ್ಲೆಟ್, ನಾಥನ್ ಎಲ್ಲಿಸ್, ಮ್ಯಾಟ್ ಕುನ್ಹೆಮನ್, ಜೋಶ್ ಹ್ಯಾಜಲ್‌ವುಡ್


