ಮೈಸೂರು: ಯಾರದ್ದೊ ಹೇಳಿಕೆ ಆಧಾರಿಸಿ ಸಭೆ ಮಾಡಲು ಆಗುವುದಿಲ್ಲ, ಸಭೆ ಮುಂದುಡಲು ಸಾಧ್ಯವಿಲ್ಲ ಎಂದು ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯದುವೀರ್ ಹೇಳಿಕೆ ಮುಖ್ಯವೋ ಕಾನೂನು ಮುಖ್ಯವೋ? ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಭೆಯನ್ನು ಕಾನೂನಾತ್ಮಕವಾಗಿ ಮಾಡುತ್ತಿದ್ದೇನೆ.
ಯಾರದ್ದೋ ಹೇಳಿಕೆ ಆಧರಿಸಿ ಸಭೆ ಮಾಡಲು ಆಗುವುದಿಲ್ಲ. ಸಭೆ ಮುಂದೂಡಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಇನ್ನೂ ಮುಡಾ ಮಾಜಿ ಆಯುಕ್ತ ದಿನೇಶ್ ಅಮಾನತು ವಿಚಾರ ಗೊತ್ತಿಲ್ಲ. 2009ರ ಹಿಂದಿನ ಬಡಾವಣೆಗೆ 50:50 ಬದಲಿ ನಿವೇಶನ ಅನ್ವಯ ಆಗುವುದಿಲ್ಲ. ಈ ಅಂಶ ಉಲ್ಲೇಖದ ಬಗ್ಗೆ ನನಗೆ ಮಾಹಿತಿ ಇಲ್ಲ. ಮುಡಾ ಆದೇಶದ ಅಂಶಗಳು ಏನು ಎಂಬುದು ಸಹ ಗೊತ್ತಿಲ್ಲ. ಗೊತ್ತಿಲ್ಲದನ್ನು ನಾನು ಹೇಗೆ ವಿವರವಾಗಿ ಹೇಳಲಿ. ಆದೇಶದಲ್ಲಿ ಏನಿದೆ ಎಂದು ನೋಡಿಕೊಂಡು ಮಾತನಾಡುತ್ತೇನೆ ಎಂದು ಹೇಳಿದರು.



